Home Advertisement
Home ನಮ್ಮ ಜಿಲ್ಲೆ ಬೆಂಗಳೂರು ಶಾಲಾ-ಕಾಲೇಜುಗಳಲ್ಲಿ ಇನ್ನು ಮುಂದೆ ಹಿಜಾಬ್‌ ಧರಿಸಲು ಅವಕಾಶ

ಶಾಲಾ-ಕಾಲೇಜುಗಳಲ್ಲಿ ಇನ್ನು ಮುಂದೆ ಹಿಜಾಬ್‌ ಧರಿಸಲು ಅವಕಾಶ

0
140

ಬೆಂಗಳೂರು: ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿಯೂ ಮುಸ್ಲಿಂ ವಿದ್ಯಾರ್ಥಿನಿಯರು ಇನ್ನು ಮುಂದೆ ಹಿಜಾಬ್‌ ಧರಿಸಲು ಅವಕಾಶ ನೀಡಲಾಗಿದ್ದು, ಜತೆಗೆ ಎಲ್ಲ ಧರ್ಮಗಳ ಧಾರ್ಮಿಕ ವಸ್ತುಗಳಿಗೂ ಅವಕಾಶ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿರುವ ಅವರು, ಶಾಲಾ-ಕಾಲೇಜುಗಳಿಗೆ ಎಲ್ಲ ಧರ್ಮದ ವಿದ್ಯಾರ್ಥಿಗಳು ಸಮವಸ್ತ್ರದ ಜೊತೆಗೆ ತಮ್ಮ ಧಾರ್ಮಿಕ ವಸ್ತುಗಳನ್ನು ಧರಿಸಬಹುದು ಎಂದು ಅವರು ತಿಳಿಸಿದ್ದಾರೆ.

ಈ ಹಿಂದಿನ ಸರ್ಕಾರ ಶಾಲಾ-ಕಾಲೇಜುಗಳಲ್ಲಿ ಹಿಬಾಜ್ ನಿಷೇಧ ಮಾಡಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದಲೇ ಈ ಆದೇಶವನ್ನು ತೆರವು ಮಾಡಲಾಗವುದು. ವಿದ್ಯಾರ್ಥಿಗಳು ಜನಿವಾರ, ಪವಿತ್ರ ದಾರ, ರುದ್ರಾಕ್ಷಿ, ಶಿವದಾರ, ಪೇಟ, ಟರ್ಬನ್, ಹಿಜಾಬ್ ಧರಿಸಲು ಅವಕಾಶ ನೀಡಲಾಗಿದೆ ಎಂದರು.

ಈ ಶೈಕ್ಷಣಿಕ ವರ್ಷದಿಂದಲೇ ಈ ಹೊಸ ನಿಯಮ ಜಾರಿಯಾಗಲಿದ್ದು, ಒಂದರಿಂದ 12ನೇ ತರಗತಿಗೆ ಮಾತ್ರ ಇದಕ್ಕೆ ಅನುಮತಿ ನೀಡಲಾಗಿದೆ ಎಂದು ಸಚಿವರು ಈ ವೇಳೆ ಸ್ಪಷ್ಟಪಡಿಸಿದರು.