ಬಟ್ಟೆ ಕೈಚೀಲ ಖರೀದಿಯಲ್ಲಿ ಅಕ್ರಮ: ರೋಹಿಣಿ ಸಿಂಧೂರಿಗೆ ಸಂಕಷ್ಟ

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ಸ್ವಚ್ಛ ಭಾರತ ಅಭಿಯಾನದಡಿ ಬಟ್ಟೆ ಕೈಚೀಲ ಖರೀದಿಯಲ್ಲಿ ಅಕ್ರಮ ನಡೆಸಿದ್ದಾರೆ ಎಂಬ ಆರೋಪದಡಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಿ, ತನಿಖೆ ನಡೆಸುವ ಪೂರ್ವಾನುಮತಿಗೆ ಮುಂದಾಗುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ಬುಧವಾರ ನಿರ್ದೇಶನ ನೀಡಿದೆ. ಮೈಸೂರಿನ ವಕೀಲ ಎನ್.ಆರ್.ರವಿಚಂದ್ರೇಗೌಡ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಪೀಠವು ರೋಹಿಣಿ ವಿರುದ್ಧದ ಆರೋಪದ ತನಿಖೆಗೆ ನಿರಾಕರಿಸಿದ್ದ ರಾಜ್ಯ ಸರಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (ಡಿಪಿಎಆರ್) ಆದೇಶವನ್ನು … Continue reading ಬಟ್ಟೆ ಕೈಚೀಲ ಖರೀದಿಯಲ್ಲಿ ಅಕ್ರಮ: ರೋಹಿಣಿ ಸಿಂಧೂರಿಗೆ ಸಂಕಷ್ಟ