ಇರಾನ್–ಇಸ್ರೇಲ್ ಸಂಘರ್ಷ: ಬೆಂಗಳೂರಿನಲ್ಲಿ ಹಲವು ವಿಮಾನಗಳ ಹಾರಾಟ ಸ್ಥಗಿತ

ಬೆಂಗಳೂರು: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಮತ್ತಷ್ಟು ತೀವ್ರಗೊಂಡ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯ ಪ್ರದೇಶದ ಹಲವಾರು ದೇಶಗಳು ತಮ್ಮ ಏರ್‌ಸ್ಪೇಸ್‌ಗೆ ತಾತ್ಕಾಲಿಕ ನಿರ್ಬಂಧ ವಿಧಿಸಿರುವುದು ಜಾಗತಿಕ ವಿಮಾನ ಸಂಚಾರದ ಮೇಲೆ ಪರಿಣಾಮ ಬೀರಿದೆ. ಇದರ ಪರಿಣಾಮವಾಗಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಹಲವು ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ರದ್ದುಗೊಂಡಿದೆ. ಇತ್ತೀಚಿನ ಮಾಹಿತಿಯ ಪ್ರಕಾರ, ಬೆಂಗಳೂರಿಗೆ ಆಗಮಿಸಬೇಕಿದ್ದ 9 ವಿಮಾನಗಳು ಹಾಗೂ ಬೆಂಗಳೂರಿನಿಂದ ನಿರ್ಗಮಿಸಬೇಕಿದ್ದ 10 ವಿಮಾನಗಳು ಸೇರಿ ಒಟ್ಟು 19 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. … Continue reading ಇರಾನ್–ಇಸ್ರೇಲ್ ಸಂಘರ್ಷ: ಬೆಂಗಳೂರಿನಲ್ಲಿ ಹಲವು ವಿಮಾನಗಳ ಹಾರಾಟ ಸ್ಥಗಿತ