Home Advertisement
Home ನಮ್ಮ ಜಿಲ್ಲೆ ಬೆಂಗಳೂರು “ಸೂಪರ್ ಸ್ಟಾರ್ ಕಾನೂನಿಗಿಂತ ಮೇಲಲ್ಲ”: ರಣವೀರ್‌ಗೆ ಕರ್ನಾಟಕ ಹೈಕೋರ್ಟ್ ತರಾಟೆ

“ಸೂಪರ್ ಸ್ಟಾರ್ ಕಾನೂನಿಗಿಂತ ಮೇಲಲ್ಲ”: ರಣವೀರ್‌ಗೆ ಕರ್ನಾಟಕ ಹೈಕೋರ್ಟ್ ತರಾಟೆ

0
636

ತನಿಖೆಗೆ ಸಹಕರಿಸುವ ಷರತ್ತಿನಡಿ ರಣವೀರ್ ವಿರುದ್ಧ ಬಲವಂತದ ಕ್ರಮ ತಾತ್ಕಾಲಿಕ ತಡೆ

ಬೆಂಗಳೂರು: ‘ಕಾಂತಾರ ಚಾಪ್ಟರ್-1’ ಚಿತ್ರದ ದೈವಪಾತ್ರಗಳನ್ನು ಅಪಮಾನಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಸಂಬಂಧ ದಾಖಲಾಗಿರುವ ಪ್ರಕರಣದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್‌ಗೆ ಶರತ್ತುಬದ್ಧ ರಕ್ಷಣೆ ನೀಡಿರುವ ಕರ್ನಾಟಕ ಹೈಕೋರ್ಟ್, ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ನಿರ್ದೇಶಿಸಿದೆ. ಈ ಷರತ್ತಿನಡಿ ಅವರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಗ್ರೌಂಡ್ಸ್ ಠಾಣೆ ಪೊಲೀಸರಿಗೆ ಆದೇಶಿಸಲಾಗಿದೆ.

ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ದಾಖಲಾಗಿರುವ ಖಾಸಗಿ ದೂರು ಹಾಗೂ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ರದ್ದುಪಡಿಸುವಂತೆ ರಣವೀರ್ ಸಿಂಗ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.

ಇದನ್ನೂ ಓದಿ: ಮಂತ್ರಾಲಯದಲ್ಲಿ ರಾಘವೇಂದ್ರ ರಾಜ್‌ಕುಮಾರ್‌ಗೆ ಗೌರವ ಡಾಕ್ಟರೇಟ್

“ನಾಲಿಗೆ ಹರಿಬಿಡಬಾರದು” – ನ್ಯಾಯಪೀಠದ ಎಚ್ಚರಿಕೆ : ವಿಚಾರಣೆ ವೇಳೆ ನ್ಯಾಯಪೀಠ, “ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಕಾನೂನಿಗಿಂತ ಮೇಲಲ್ಲ. ಯಾರಿಗೂ ಮತ್ತೊಬ್ಬರ ಧಾರ್ಮಿಕ ಭಾವನೆಗಳಿಗೆ ಘಾಸಿ ಮಾಡುವ ಹಕ್ಕಿಲ್ಲ” ಎಂದು ಮಾರ್ಮಿಕವಾಗಿ ಹೇಳಿತು. ಕಲಾವಿದರು ಸಾರ್ವಜನಿಕ ವೇದಿಕೆಗಳಲ್ಲಿ ಮಾತನಾಡುವಾಗ ಎಚ್ಚರಿಕೆ ವಹಿಸಬೇಕು ಎಂದು ನ್ಯಾಯಪೀಠ ತೀಕ್ಷ್ಣವಾಗಿ ಸೂಚಿಸಿತು.

ರಣವೀರ್ ಪರ ವಾದ: ರಣವೀರ್ ಸಿಂಗ್ ಪರ ಹಿರಿಯ ವಕೀಲ ಸಜನ್ ಪೂವಯ್ಯ ವಾದ ಮಂಡಿಸಿ, “ಅರ್ಜಿದಾರರು ಅಜಾಗರೂಕವಾಗಿ ಹೇಳಿಕೆ ನೀಡಿದ್ದಾರೆ. ತಮ್ಮ ತಪ್ಪು ಅರಿವಿಗೆ ಬಂದ ಕೂಡಲೇ ಕ್ಷಮೆ ಕೋರಿದ್ದಾರೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶ ಇರಲಿಲ್ಲ” ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಇದನ್ನೂ ಓದಿ: ಧಾರವಾಡದಲ್ಲಿ ಉಗ್ರಗೊಂಡ ಉದ್ಯೋಗಾಕಾಂಕ್ಷಿಗಳ ಹೋರಾಟ: ಸಚಿವರ ಭಾವಚಿತ್ರಗಳಿಗೆ ಚಪ್ಪಲಿ ಸೇವೆ

ಈ ವಾದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಕ್ಷಮೆ ಕೇಳುವುದರಿಂದ ಮಾತ್ರ ಹೇಳಿಕೆಯಿಂದಾದ ಘಾಸಿ ಮಾಸುವುದಿಲ್ಲ. ಇಂತಹ ವಿಚಾರಗಳಲ್ಲಿ ನ್ಯಾಯಾಲಯ ಕಟ್ಟುನಿಟ್ಟಾಗಿದೆ ಎಂದು ಸ್ಪಷ್ಟಪಡಿಸಿತು.