SK Home Ad
Home ನಮ್ಮ ಜಿಲ್ಲೆ ಬೆಂಗಳೂರು ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

0
129

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆ ಚುನಾವಣೆಗೆ ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಯೂ ಆಗಿರುವ ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ ಖರ್ಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ ಇದ್ದರು.

ವಿಧಾನಸಭೆಯಿಂದ ಆಯ್ಕೆಯಾಗುವ ರಾಜ್ಯಸಭೆಯ ಮೂರು ಸ್ಥಾನಗಳಿಗೆ ಗುರುವಾರ ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಮತ್ತು ಮನ್ಸೂರ್ ಅಲಿಖಾನ್ ಮೂವರ ಹೆಸರನ್ನು ಅಂತಿಮಗೊಳಿಸಲಾಗಿತ್ತು.

ಕರ್ನಾಟಕದಿಂದ ಒಟ್ಟು ನಾಲ್ಕು ಸ್ಥಾನಗಳು ಸೇರಿದಂತೆ 24 ಸ್ಥಾನಗಳಿಗೆ ಇದೇ ಜೂನ್‌ 18ರಂದು ಚುನಾವಣೆ ನಡೆಯಲಿದ್ದು, ವಿಧಾನಸಭೆಯಲ್ಲಿ ಸದ್ಯ ಇರುವ ಸದಸ್ಯರ ಬಲದಲ್ಲಿ ಕಾಂಗ್ರೆಸ್ ಮೂರು ಮತ್ತು ಬಿಜೆಪಿ ಒಂದು ಸ್ಥಾನವನ್ನು ಗೆಲ್ಲಬಹುದಾಗಿದೆ.