ಸಚಿವ ಡಿ. ಸುಧಾಕರ್ ನಿಧನ

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖಿಕ‌ ಇಲಾಖೆ ಸಚಿವ ಡಿ. ಸುಧಾಕರ್ (66) ಭಾನುವಾರ ನಸುಕಿನ ಜಾವ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದರು. ಕೆಲ ದಿನಗಳ ಹಿಂದೆ ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಶಸ್ತ್ರಚಿಕಿತ್ಸೆ ಬಳಿಕ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಿಮ್ಸ್‌ ವೈದ್ಯರ ತಂಡ ಸತತ ನಿಗಾವಹಿಸಿ ಚಿಕಿತ್ಸೆ ನೀಡಿದರೂ ಕೂಡ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ನಸುಕಿನ ಜಾವ 3.15ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.