SK Home Ad
Home ನಮ್ಮ ಜಿಲ್ಲೆ ಬೆಂಗಳೂರು ನೂತನ ಸಿಎಂ ಡಿಕೆಶಿಗೆ ಶುಭ ಕೋರಿದ ಪ್ರಧಾನಿ ಮೋದಿ

ನೂತನ ಸಿಎಂ ಡಿಕೆಶಿಗೆ ಶುಭ ಕೋರಿದ ಪ್ರಧಾನಿ ಮೋದಿ

0
93

ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ. ಶಿವಕುಮಾರ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, “ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿಗೆ ಶುಭಾಶಯಗಳು. ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ಜನರ ಕಲ್ಯಾಣಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸಲಿದೆ” ಎಂದು ಬರೆದುಕೊಂಡಿದ್ದಾರೆ.

ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧನೆ ಮಾಡಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಡಿಸಿಎಂ ಜಿ. ಪರಮೇಶ್ವರ್‌ ಅವರೊಂದಿಗೆ ಸೇರಿದಂತೆ 12 ಜನ ಸಚಿವರು ಪ್ರಮಾಣವಚನ ಸ್ವೀಕರಿಸಿದರು.