ರೇಣುಕಾಸ್ವಾಮಿ ಕೊಲೆ ಪ್ರಕರಣ: ತ್ವರಿತ ವಿಚಾರಣೆಗೆ ಸುಪ್ರೀಂ ಸೂಚನೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಆರೋಪಿಗಳ ವಿರುದ್ಧ ನಡೆಯುತ್ತಿರುವ ವಿಚಾರಣೆಯಲ್ಲಿ ಮಹತ್ವದ ಬೆಳವಣಿಗೆಗಳು ಕಂಡುಬಂದಿವೆ. ಪ್ರಕರಣದ ವಿಚಾರಣೆ ನಿಧಾನಗತಿಯಲ್ಲಿ ಸಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ವಿಚಾರಣೆಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದೆ. ಪ್ರಕರಣದಲ್ಲಿ ಒಟ್ಟು 273 ಸಾಕ್ಷಿದಾರರ ಪೈಕಿ ಇದುವರೆಗೆ ಅಲ್ಪ ಸಂಖ್ಯೆಯ ಸಾಕ್ಷಿಗಳಷ್ಟೇ ವಿಚಾರಣೆಗೆ ಒಳಗಾಗಿರುವುದನ್ನು ಉಲ್ಲೇಖಿಸಿ ದರ್ಶನ್ ಪರ ವಕೀಲರು ನ್ಯಾಯಾಲಯದ ಗಮನ ಸೆಳೆದಿದ್ದಾರೆ. ವಿಚಾರಣೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ದರ್ಶನ್ ಸುಪ್ರೀಂ … Continue reading ರೇಣುಕಾಸ್ವಾಮಿ ಕೊಲೆ ಪ್ರಕರಣ: ತ್ವರಿತ ವಿಚಾರಣೆಗೆ ಸುಪ್ರೀಂ ಸೂಚನೆ