SK Home Ad
Home ನಮ್ಮ ಜಿಲ್ಲೆ ಬೆಂಗಳೂರು ಲೈಂಗಿಕ ದೌರ್ಜನ್ಯ ಕೇಸ್: ಸೂರಜ್​ ರೇವಣ್ಣಗೆ ಮತ್ತೊಂದು ಶಾಕ್

ಲೈಂಗಿಕ ದೌರ್ಜನ್ಯ ಕೇಸ್: ಸೂರಜ್​ ರೇವಣ್ಣಗೆ ಮತ್ತೊಂದು ಶಾಕ್

0
215

ಬೆಂಗಳೂರು: ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಹಿರಿಯ ಪುತ್ರ, ಜೆಡಿಎಸ್‌ನ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಕೈಬಿಡುವಂತೆ ಕೋರಿದ್ದ ಮರುಪರಿಶೀಲನಾ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಈ ಮೂಲಕ ಸೂರಜ್ ರೇವಣ್ಣ ಅವರಿಗೆ ಕಾನೂನು ಹೋರಾಟದಲ್ಲಿ ಭಾರಿ ಹಿನ್ನಡೆ ಆದಂತಾಗಿದೆ.

ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಕೋರಿ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಮಂಗಳವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಕಟ್ಟಾ ಕಾಂಗ್ರೆಸಿಗರು ನಿಯತ್ತಿನ ನಾಯಿಗಳು

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಸಲ್ಲಿಸಿದ್ದ ‘ಬಿ’ ರಿಪೋರ್ಟ್ನ್ನು ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ತಿರಸ್ಕರಿಸಿತ್ತು. ಜೊತೆಗೆ ಮರು ತನಿಖೆಗೆ ಆದೇಶ ಹೊರಡಿಸಿತ್ತು. ಇದೇ ಪ್ರಕರಣದಲ್ಲಿ ಸೂರಜ್ ರೇವಣ್ಣ ಜೈಲು ಶಿಕ್ಷೆ ಅನುಭವಿಸಿದ್ದರು. ನಂತರ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿತ್ತು.