ಬಕ್ರೀದ್ ದಿನವೇ ಟಗರು ರಾಜೀನಾಮೆಗೆ ಮುಹೂರ್ತ ಫಿಕ್ಸ್
ಬೆಂಗಳೂರು: ಬಕ್ರೀದ್ ಹಬ್ಬವಾದ ಗುರುವಾರದ ದಿನವೇ ಟಗರು ಖ್ಯಾತಿಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ. ಮಂಗಳವಾರ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಡೀ ದಿನ ನಡೆದ ಮ್ಯಾರಾಥಾನ್ ಸಭೆಗಳ ಬಳಿಕ ಈ ಅಂತಿಮ ತೀರ್ಮಾನವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡಿದೆ. ಗುರುವಾರ ಮುಂಜಾನೆ 11.30ರ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಅದಕ್ಕೂ ಪೂರ್ವದಲ್ಲಿ ತಮ್ಮ ಆಪ್ತ ಶಾಸಕರೊಂದಿಗೆ ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.
Copy and paste this URL into your WordPress site to embed
Copy and paste this code into your site to embed