ಬೆಂಗಳೂರು: ಮಾರ್ಚ್ 6ರಿಂದ 27ರವರೆಗೆ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮೊದಲ ದಿನವೇ ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂಗಡಪತ್ರ ಮಂಡಿಸಲಿದ್ದಾರೆ ಎಂದು ಕಾನೂನು ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದರು.
ರಾಜ್ಯ ಸಂಪುಟ ಸಭೆ ಮುಕ್ತಾಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳ ಮಾಹಿತಿ ನೀಡಿದರು. ಮಾರ್ಚ್ 6ರಿಂದ 14 ದಿನಗಳ ಕಾಲ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ನಡೆಯಲಿದೆ ಎಂದರು.
ಇದನ್ನೂ ಓದಿ: ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯಕ್ಕೆ ಷರತ್ತು ಬದ್ಧ ಅನುಮತಿ
ರಾಜ್ಯದಲ್ಲಿ ಅಧಿಕಾರ ಹಂಚಿಕೆ ಚರ್ಚೆಯ ಮಧ್ಯೆಯೇ ಸಿಎಂ ಸಿದ್ದರಾಮಯ್ಯ ಮತ್ತೊಂದು ಬಜೆಟ್ ಮಂಡನೆಗೆ ಈಗಾಗಲೇ ಸಿದ್ಧತೆ ನಡೆಸಿದ್ದು, ಇಲಾಖಾವಾರು ಪೂರ್ವಭಾವಿ ಸಭೆಗಳನ್ನೂ ಆರಂಭಿಸಿದ್ದಾರೆ. ಈ ಮಧ್ಯೆ ಬುಧವಾರ ಹಾಗೂ ಗುರುವಾರ ಎರಡು ದಿನಗಳ ಕಾಲ ದೆಹಲಿಗೆ ತೆರಳಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅಧಿಕಾರ ಹಂಚಿಕೆಯ ಬೇಡಿಕೆ ಮುಂದಿಟ್ಟು ಚರ್ಚಿಸಿದ್ದರು. ಆದರೆ ಮುಂದಿನ ತಿಂಗಳ ಬಜೆಟ್ ಅಧಿವೇಶನ ದಿನಾಂಕ ಪ್ರಕಟಿಸುವ ಮೂಲಕ ಗೊಂದಲಗಳಿಗೆ ತಾತ್ಕಾಲಿಕ ತೆರೆ ಬಿದ್ದಂತಾಗಿದೆ.























