ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳದ ಬೇಡಿಕೆಯನ್ನು ಮಾನವೀಯ ದೃಷ್ಟಿಕೋನದಿಂದ ಪರಿಗಣಿಸಿ, ಅವರ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರು ಹಲವು ದಿನಗಳಿಂದ ಚಳಿಯನ್ನೂ ಲೆಕ್ಕಿಸದೆ ಬಯಲಿನಲ್ಲಿಯೇ ಹಗಲು-ರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಹಿಳಾ ಕಾರ್ಯಕರ್ತೆಯರ ಇಂತಹ ಪರಿಸ್ಥಿತಿ ನಿಜಕ್ಕೂ ಕಳವಳಕಾರಿಯಾಗಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿಗಳು ಕೂಡಲೇ ಮಾತುಕತೆ ನಡೆಸಬೇಕು. ಮಾಸಿಕ ಗೌರವಧನವನ್ನು 15,000ಕ್ಕೆ ಹೆಚ್ಚಿಸಬೇಕೆಂಬ ಅವರ ಬೇಡಿಕೆಯನ್ನು ಮಾನವೀಯತೆ ಮತ್ತು ಸಹಾನುಭೂತಿಯಿಂದ ಪರಿಗಣಿಸಿ ಶೀಘ್ರ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.
ಸರ್ಕಾರದ ಸಮಯೋಚಿತ ಮಧ್ಯಪ್ರವೇಶದಿಂದ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸಕಾರಾತಕ ಪರಿಹಾರ ದೊರೆಯಬೇಕು. ಪ್ರತಿಭಟನೆಯಲ್ಲಿ ತೊಡಗಿರುವ ಮಹಿಳೆಯರು ಗೌರವಯುತವಾಗಿ ತಮ ಮನೆಗಳಿಗೆ ಮರಳುವಂತಾಗಬೇಕು ಎಂಬ ಆಶಯವನ್ನೂ ಸುಮಲತಾ ವ್ಯಕ್ತಪಡಿಸಿದ್ದಾರೆ.
ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರ ಪತ್ರದ ಬೆನ್ನಲೇ ಸರ್ಕಾರ ಯಾವ ರೀತಿ ಕ್ರಮ ಕೈಗೊಳ್ಳಲಿದೆ ಎಂಬುದು ಕುತುಹಲ ಮೂಡಿಸಿದೆ.

















