Home Advertisement
Home ನಮ್ಮ ಜಿಲ್ಲೆ ಬೆಂಗಳೂರು ಮೈಸೂರ್ ಸ್ಯಾಂಡಲ್‌ಸೋಪ್ ರಾಯಭಾರಿಯಾಗಿ ತಮನ್ನಾ

ಮೈಸೂರ್ ಸ್ಯಾಂಡಲ್‌ಸೋಪ್ ರಾಯಭಾರಿಯಾಗಿ ತಮನ್ನಾ

0
30

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ ಸಂಸ್ಥೆಯ ಉತ್ಪನ್ನಗಳ ಮಾರುಕಟ್ಟೆ ವಿಸ್ತರಣೆಗಾಗಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ಎರಡು ವರ್ಷಗಳ ಅವಧಿಗೆ ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಕ ಮಾಡಲಾಗಿದ್ದು ಸೋಮವಾರ ಅಧಿಕೃತ ಆದೇಶ ಹೊರಡಿಸಲಾಗಿದೆ.

ತಮ್ಮನ್ನಾ ಅವರನ್ನು ರಾಯಭಾರಿಯನ್ನಾಗಿ ನೇಮಿಸಿದ್ದ ಹಿನ್ನೆಲೆಯಲ್ಲಿ ಕನ್ನಡಿಗರು ವಿರೋಧ ವ್ಯಕ್ತಪಡಿಸಿ, ಕನ್ನಡದಲ್ಲಿ ನಟಿಯರು ಇಲ್ಲವೇ? ಎಂದು ಪ್ರಶ್ನಿಸಿದ್ದರು. ಹಲವು ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಆದರೂ ಅವರನ್ನೇ ನೇಮಿಸಿ ಅಧಿಕೃತ ಆದೇಶ ಹೊರಡಿಸಿದ್ದು ಇದು ಜಟಾಪಟಿಗೆ ಕಾರಣವಾಗುವ ಸಾಧ್ಯತೆಗಳು ಇವೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರು, ಇದೀಗ ಐತಿಹಾಸಿಕ ‘ಮೈಸೂರು ಸ್ಯಾಂಡಲ್ ಸೋಪ್’ ಅನ್ನು ನೂತನ ವಿನ್ಯಾಸದಲ್ಲಿ ಬಿಡುಗಡೆ ಮಾಡಲಾಗುವುದು. 2030ರ ವೇಳೆಗೆ ಸಂಸ್ಥೆಯ ವಾರ್ಷಿಕ ವಹಿವಾಟನ್ನು 5,000 ಕೋಟಿ ರೂ.ಗಳಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ತಮನ್ನಾ ಅವರ ತಾರಾ ವರ್ಚಸ್ಸಿನ ಮೂಲಕ ಉತ್ತರ ಭಾರತದ ಮಾರುಕಟ್ಟೆ ಹಾಗೂ ಯುವಜನಾಂಗವನ್ನು ತಲುಪಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಒಪ್ಪಂದದ ಅವಧಿಯಲ್ಲಿ ತಮನ್ನಾ ಅವರು ಬೇರೆ ಯಾವುದೇ ಸಾಬೂನು ಕಂಪನಿಗಳ ಜಾಹೀರಾತಿನಲ್ಲಿ ನಟಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ದಕ್ಷಿಣ ಭಾರತದ ಹೊರತಾಗಿ ದೆಹಲಿ ಮತ್ತು ಮಧ್ಯ ಭಾರತದ ಮೇಲೆ ಹೆಚ್ಚಿನ ಒತ್ತು. 2025-26ರಲ್ಲಿ ವಹಿವಾಟು 2,000 ಕೋಟಿ ರೂ. ಮುಟ್ಟುವ ನಿರೀಕ್ಷೆ ಇದೆ. ಹಳೆಯ ಯಂತ್ರಗಳನ್ನೇ ಬಳಸಿಕೊಂಡು ದಿನಕ್ಕೆ ಮೂರು ಶಿಫ್ಟ್‌ಗಳಲ್ಲಿ ಕೆಲಸ ಮಾಡುವ ಮೂಲಕ ಸಾರ್ವಕಾಲಿಕ ಉತ್ಪಾದನೆ ಮಾಡಲಾಗಿದೆ ಎಂದು ಕೆಎಸ್‌ಡಿಎಲ್ ಅಧ್ಯಕ್ಷ ಸಿ.ಎಸ್. ಅಪ್ಪಾಜಿ ನಾಡಗೌಡ ತಿಳಿಸಿದ್ದಾರೆ.

Previous articleಆನ್‌ಲೈನ್ ಟ್ರೇಡಿಂಗ್ ಹೆಸರಲ್ಲಿ 2.59 ಕೋಟಿ ವಂಚನೆ
Next articleಚಂದ್ರನ ಮೇಲೆ ಮನುಷ್ಯರ ನಗರ ನಿರ್ಮಿಸಲು ಹೊರಟ ಎಲಾನ್ ಮಸ್ಕ್