SK Home Ad
Home ನಮ್ಮ ಜಿಲ್ಲೆ ಬೆಂಗಳೂರು ಕೇಂದ್ರ ಸಚಿವ ಕಿರಣ್ ರಿಜಿಜು ಕಾಂಗ್ರೆಸ್ ಪಕ್ಷದ ಬಗ್ಗೆ ಚಿಂತಿಸುವುದು ಬೇಡ

ಕೇಂದ್ರ ಸಚಿವ ಕಿರಣ್ ರಿಜಿಜು ಕಾಂಗ್ರೆಸ್ ಪಕ್ಷದ ಬಗ್ಗೆ ಚಿಂತಿಸುವುದು ಬೇಡ

0
31

ಬೆಂಗಳೂರು: “ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ನಾವು ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ವಿಧಾನಸೌಧ ಆವರಣದಲ್ಲಿ ಎಸ್. ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ರಾಹುಲ್ ಗಾಂಧಿ ಅವರು ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ಚರ್ಚೆ ಮಾಡಿದ್ದಕ್ಕೆ ಕಿರಣ್ ರಿಜಿಜು ಅವರು ಕರ್ನಾಟಕ ಸಚಿವ ಸಂಪುಟದಲ್ಲಿ ಮಹಿಳೆಯರಿಲ್ಲ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಈ ಮಸೂದೆಯನ್ನು ರೂಪಿಸಿ, ಲೋಕಸಭೆಯಲ್ಲಿ ಪಾಸ್ ಮಾಡಿದ್ದವರು ಕಾಂಗ್ರೆಸ್‌ನವರು. ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ನಾವು ಮಹಿಳೆರಿಗೆ ಹೆಚ್ಚು ಸ್ಥಾನ ನೀಡಿದ್ದೆವು. ಸದ್ಯದಲ್ಲೇ ಸಂಪುಟ ವಿಸ್ತರಣೆ ವಿಚಾರ ಬಗೆಹರಿಯಲಿದೆ. ರಿಜಿಜು ಅವರು ಕಾಂಗ್ರೆಸ್ ಪಕ್ಷದ ಬಗ್ಗೆ ಚಿಂತಿಸುವುದು ಬೇಡ, ಅವರು ತಮ್ಮ ಪಕ್ಷ ಹಾಗೂ ಸರ್ಕಾರದ ಬಗ್ಗೆ ಆಲೋಚಿಸಲಿ” ಎಂದರು.

ಕರ್ನಾಟಕಕ್ಕೆ ಗೌರವ ತಂದ ಧೀಮಂತ ನಾಯಕ ನಿಜಲಿಂಗಪ್ಪ: “ನಿಜಲಿಂಗಪ್ಪ ಅವರು ಕರ್ನಾಟಕಕ್ಕೆ ಗೌರವ ತಂದ ಧೀಮಂತ ನಾಯಕ. ಕರ್ನಾಟಕದ ಏಕೀಕರಣಕ್ಕೆ ದೊಡ್ಡ ಹೋರಾಟ ಮಾಡಿದ್ದರು. ಮಹಾತ್ಮಾ ಗಾಂಧೀಜಿ ಅವರ ಚಿಂತನೆ ಅಳವಡಿಸಿಕೊಂಡ ನಾಯಕರು. ನಮ್ಮ ಕರ್ನಾಟಕದಿಂದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದವರು ನಿಜಲಿಂಗಪ್ಪ ಅವರು. ಅವರ ಬಳಿಕ ಇಂದು ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾಗಿದ್ದಾರೆ. ಕೇಂದ್ರದಲ್ಲಿ ಕನ್ನಡ ಹಾಗೂ ಕರ್ನಾಟಕದ ಏಕೀಕರಣಕ್ಕೆ ಧ್ವನಿ ಎತ್ತಿದ ನಾಯಕ” ಎಂದು ಬಣ್ಣಿಸಿದರು.

“ಸರಳತೆ ನಿಜಲಿಂಗಪ್ಪ ಅವರ ಆಸ್ತಿ. ಅವರ ಆಸ್ತಿ ಬೇರೆಯವರ ಪಾಲಾಗಬಾರದು ಎಂದು ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಆಸ್ತಿಯನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದೆ. ಇಂತಹ ನಾಯಕರ ಆಡಳಿತ ಜಾತ್ಯಾತೀತ ತತ್ವ ಬಸವಣ್ಣನವರ ಚಿಂತನೆಯನ್ನು ಪ್ರತಿಬಿಂಬಿಸಿದ ಧೀಮಂತ ನಾಯಕ, ಮುಖ್ಯಮಂತ್ರಿಯಾಗಿದ್ದರು. ನಾವೆಲ್ಲರೂ ಅವರ ಹಾದಿಯಲ್ಲಿ ಸಾಗಬೇಕು” ಎಂದರು.