SK Home Ad
Home ನಮ್ಮ ಜಿಲ್ಲೆ ಬೆಂಗಳೂರು ಆಗಸ್ಟ್ 15ಕ್ಕೆ ವಿಧಾನಸೌಧ ಮೆಟ್ರೋ ನಿಲ್ದಾಣದಲ್ಲಿ ತಾತ್ಕಾಲಿಕ ನಿರ್ಬಂಧ

ಆಗಸ್ಟ್ 15ಕ್ಕೆ ವಿಧಾನಸೌಧ ಮೆಟ್ರೋ ನಿಲ್ದಾಣದಲ್ಲಿ ತಾತ್ಕಾಲಿಕ ನಿರ್ಬಂಧ

0
55
ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಆಗಸ್ಟ್ 15ರಂದು ವಿಧಾನಸೌಧ ಮೆಟ್ರೋ ನಿಲ್ದಾಣದಲ್ಲಿ ತಾತ್ಕಾಲಿಕ ನಿರ್ಬಂಧ.

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿಧಾನಸೌಧದಲ್ಲಿ ನಡೆಯಲಿರುವ ‘ಫ್ರೀಡಂ ಹಬ್ಬ’ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಆಗಸ್ಟ್ 15, 2026ರಂದು ಡಾ. ಬಿ.ಆರ್. ಅಂಬೇಡ್ಕರ್–ವಿಧಾನಸೌಧ ಮೆಟ್ರೋ ನಿಲ್ದಾಣದಲ್ಲಿ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ತಿಳಿಸಿದೆ. BMRCL ಅಧಿಕೃತ ಪ್ರಕಟಣೆ

ಸಾರ್ವಜನಿಕರ ಸುರಕ್ಷತೆ ಮತ್ತು ಜನಸಂದಣಿ ನಿರ್ವಹಣೆಯ ದೃಷ್ಟಿಯಿಂದ ಬೆಳಗ್ಗೆ 10 ಗಂಟೆಯಿಂದ ರಾತ್ರಿ 9.30ರವರೆಗೆ ಈ ನಿಲ್ದಾಣಕ್ಕೆ ಪ್ರಯಾಣಿಕರ ಪ್ರವೇಶ ಮತ್ತು ನಿರ್ಗಮನವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗುತ್ತದೆ. ಈ ಅವಧಿಯಲ್ಲಿ ಮೆಟ್ರೋ ರೈಲುಗಳು ವಿಧಾನಸೌಧ ನಿಲ್ದಾಣದಲ್ಲಿ ನಿಲುಗಡೆ ಮಾಡದೆ ಸಂಚರಿಸಲಿವೆ.

ರಾತ್ರಿ 9.30ರಿಂದ ನಿಲ್ದಾಣ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಕಾರ್ಯಕ್ರಮ ಮುಗಿದ ಬಳಿಕ ಪ್ರಯಾಣಿಕರು ಹೊರಹೋಗಲು ಅನುಕೂಲವಾಗುವಂತೆ ರಾತ್ರಿ 10 ಗಂಟೆಯವರೆಗೆ ನಿರ್ಗಮನಕ್ಕೆ ಅವಕಾಶ ಇರಲಿದೆ. ಕಾರ್ಯಕ್ರಮದ ಬಳಿಕ ಹೆಚ್ಚಾಗುವ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ಅಗತ್ಯಕ್ಕೆ ಅನುಗುಣವಾಗಿ ಹೆಚ್ಚುವರಿ ಮೆಟ್ರೋ ರೈಲು ಸೇವೆಗಳನ್ನು ಒದಗಿಸಲಾಗುವುದು ಎಂದು BMRCL ತಿಳಿಸಿದೆ.

ವಿಧಾನಸೌಧ ನಿಲ್ದಾಣದ ನಿರ್ಬಂಧಿತ ಅವಧಿಯಲ್ಲಿ ಪ್ರಯಾಣಿಸುವವರು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣ ಅಥವಾ ಸರ್ ಎಂ. ವಿಶ್ವೇಶ್ವರಯ್ಯ–ಸೆಂಟ್ರಲ್ ಕಾಲೇಜು ಮೆಟ್ರೋ ನಿಲ್ದಾಣಗಳನ್ನು ಪರ್ಯಾಯವಾಗಿ ಬಳಸಬಹುದು.

ಆದ್ದರಿಂದ ಆಗಸ್ಟ್ 15ರಂದು ಮೆಟ್ರೋ ಮೂಲಕ ಪ್ರಯಾಣಿಸುವವರು ಈ ತಾತ್ಕಾಲಿಕ ಬದಲಾವಣೆಯನ್ನು ಗಮನಿಸಿ ತಮ್ಮ ಪ್ರಯಾಣವನ್ನು ಮುಂಚಿತವಾಗಿ ಯೋಜಿಸಿಕೊಳ್ಳುವಂತೆ BMRCL ಮನವಿ ಮಾಡಿದೆ.