ವಿನಯ ಕುಲಕರ್ಣಿ ಜಾಮೀನು ಅರ್ಜಿ ವಜಾ

0
56

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಪ್ರಮುಖ ಆರೋಪಿ, ಕಾಂಗ್ರೆಸ್ ಪಕ್ಷದ ಶಾಸಕ ವಿನಯ್ ಕುಲಕರ್ಣಿ ಜಾಮೀನು ಅರ್ಜಿಯನ್ನು ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯವು ವಜಾಗೊಳಿಸಿದೆ.

ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಸೋಮವಾರ ಈ ಕುರಿತು ಆದೇಶ ನೀಡಿದ್ದಾರೆ. ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ 15ನೇ ಆರೋಪಿಯಾಗಿರುವ ವಿನಯ್ ಕುಲಕರ್ಣಿಗೆ ಸದ್ಯಕ್ಕೆ ಜೈಲೇ ಗತಿಯಾಗಿದೆ.

ಪ್ರಕರಣದ ಪ್ರಮುಖ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಅಥವಾ ಒತ್ತಡ ಹೇರಲು ಪ್ರಯತ್ನಿಸಿದ್ದಾರೆ ಎಂಬ ಗಂಭೀರ ಆರೋಪವೇ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ತಿರಸ್ಕೃತಗೊಳ್ಳಲು ಪ್ರಮುಖ ಕಾರಣವಾಗಿದೆ.

ಇದೇ ಪ್ರಕರಣದಲ್ಲಿ 16ನೇ ಆರೋಪಿ ಚಂದ್ರಶೇಖರ ಇಂಡಿ ಅಲಿಯಾಸ್ ಚಂದು ಮಾಮಾಗೆ ಜಾಮೀನು ದೊರೆತಿದ್ದರೂ, ಶಾಸಕ ಕುಲಕರ್ಣಿಗೆ ನ್ಯಾಯಾಲಯವು ನಿರಾಕರಿಸಿದೆ. ಪ್ರಕರಣದ ಪ್ರಮುಖ ಸಾಕ್ಷಿಗಳ ವಿಚಾರಣೆ ಈಗಾಗಲೇ ಮುಗಿದಿರುವ ಹಿನ್ನೆಲೆಯಲ್ಲಿ ಜಾಮೀನು ಕೋರಿ ವಿನಯ್ ಕುಲಕರ್ಣಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ಕುರಿತು ವಾದ-ಪ್ರತಿವಾದಗಳನ್ನು ಆಲಿಸಿದ್ದ ನ್ಯಾಯಾಲಯ ಆದೇಶವನ್ನು ಪ್ರಕಟಿಸಿದ್ದು, ಕುಲಕರ್ಣಿ ಅವರಿಗೆ ತೀವ್ರ ನಿರಾಸೆ ಮೂಡಿಸಿದೆ.

Previous articleಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಬಸ್ ಸ್ಥಗಿತ