SK Home Ad
Home ನಮ್ಮ ಜಿಲ್ಲೆ ಬೆಂಗಳೂರು ನಾಗೇಂದ್ರ ರಾಜೀನಾಮೆ ಕೊಡದಿದ್ದರೆ ಸದನ ನಡೆಸಲು ಬಿಡಲ್ಲ

ನಾಗೇಂದ್ರ ರಾಜೀನಾಮೆ ಕೊಡದಿದ್ದರೆ ಸದನ ನಡೆಸಲು ಬಿಡಲ್ಲ

0
34

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಚಿವ ಬಿ. ನಾಗೇಂದ್ರ ಅವರ ಮೇಲೆ ನ್ಯಾಯಾಲಯ ವಿಚಾರಣೆ ನಡೆಸುತ್ತಿದ್ದು, ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಅವರು ದೆಹಲಿಗೂ ಹೋಗುವಂತಿಲ್ಲ ಎಂದು ಕೋರ್ಟ್ ಹೇಳಿದೆ. ಇಂಥ ಕಳಂಕಿತರು ಮಂತ್ರಿಮಂಡಲದಲ್ಲಿ ಇರಲು ಸಾಧ್ಯವಿಲ್ಲ. ಅವರು ರಾಜೀನಾಮೆ ಕೊಡುವವರೆಗೆ ನಾವು ವಿರಮಿಸುವುದಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್ ಸರಕಾರಕ್ಕೆ ನೇರ ಸವಾಲು ಹಾಕಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿ, ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು, ಮುಖಂಡರು ರಾಜ್ಯಾದ್ಯಂತ ಹೋರಾಟ ಮಾಡಲಿದ್ದಾರೆ. ಆಗಸ್ಟ್ 13ರಿಂದ ವಿಧಾನಮಂಡಲ ಅಧಿವೇಶದನದಲ್ಲಿ ರಾಜೀನಾಮೆ ನೀಡುವವರೆಗೂ ಸದನ ನಡೆಸಲು ಬಿಡುವುದಿಲ್ಲ. ಮುಖ್ಯಮಂತ್ರಿಗಳು ಇಂದೇ ರಾಜೀನಾಮೆ ಪಡೆಯಲಿ. ಇಲ್ಲವಾದರೆ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು.

ರಾಜ್ಯ ಸರಕಾರದ ಸಂಪುಟ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದ 2 ತಿಂಗಳ ಬಳಿಕ ವಿಸ್ತರಣೆ ಆಗಿದೆ. ಕಾಂಗ್ರೆಸ್ ಪಕ್ಷವು ಮಂತ್ರಿಮಂಡಲದ ಸದಸ್ಯತ್ವವನ್ನು ಹರಾಜಿಗೆ ಇಟ್ಟಿದೆ. ಹರಾಜಿನಲ್ಲಿ ಸಚಿವ ಸ್ಥಾನವನ್ನು ಶಕ್ತ್ಯಾನುಸಾರ ಪಡೆದಿದ್ದಾರೆ. ಇದಕ್ಕೆ ಪುರಾವೆ ಎಂಬಂತೆ ವಿಡಿಯೋಗಳು ಓಡಾಡುತ್ತಿವೆ ಎಂದು ವಿವರಿಸಿದರು.