ಬೆಂಗಳೂರು: ನನಗೆ ಯಾವುದೇ ಖಾತೆಯನ್ನು ಕೊಟ್ಟರೂ ನಿಭಾಯಿಸುತ್ತೇನೆ ಎಂದು ಹೇಳಿದ್ದೆ, ನನಗೆ ಒಳ್ಳೆಯ ಖಾತೆಯನ್ನೇ ಕೊಟ್ಟಿದ್ದಾರೆ. ಅದಕ್ಕಾಗಿ ನಾನು ಸಂತೋಷವಾಗಿದ್ದೇನೆ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಮಲಿಂಗಾರೆಡ್ಡಿ ಮತ್ತು ಕೆ.ಎಚ್.ಮುನಿಯಪ್ಪ ಇಬ್ಬರೂ ಕಾಂಗ್ರೆಸ್‌ನ ಹಿರಿಯ ನಾಯಕರು, ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದವರಾಗಿದ್ದಾರೆ. ಹೈಕಮಾಂಡ್ ನಾಯಕರು ಕೂಡ ಅವರ ಬಗ್ಗೆ ಗೌರವವನ್ನು ಹೊಂದಿದ್ದಾರೆ. ಅದು ಏನೇ ಇದ್ದರೂ ಹೈಕಮಾಂಡ್ ಸೌಹಾರ್ಧಯುತವಾಗಿ ಬಗೆಹರಿಸುತ್ತಾರೆ ಎಂದು ಹೇಳಿದರು.
“ಈ ಮೊದಲೇ ನಾನು ಯಾವುದೇ ಖಾತೆಯನ್ನು ನನಗೆ ನೀಡಿದರೂ ನಿಭಾಯಿಸುತ್ತೇನೆ ಎಂದಿದ್ದೆ, ಈಗ ಒಳ್ಳೆಯ ಖಾತೆಯನ್ನೇ ನೀಡಿದ್ದಾರೆ. ಸೋ ಆಮ್ ಹ್ಯಾಪಿ” ಎಂದು ಹೇಳಿದ ಯತೀಂದ್ರ ಸಿದ್ದರಾಮಯ್ಯ ನೇರವಾಗಿ ವಾಹನವನ್ನು ಹತ್ತಿ ತೆರಳಿದರು.





















