ಧನಲಕ್ಷ್ಮೀ, ಲಕ್ಷ್ಯ ರಾಜೇಶ್‌ಗೆ ₹ 5 ಲಕ್ಷ ಬಹುಮಾನ ಘೋಷಣೆ

0
23

ಬೆಂಗಳೂರು: ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮೀ ಹಾಗೂ ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್ ಶಿಪ್‌ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಅಭಿನಂದಿಸಿ ತಲಾ ಐದು ಲಕ್ಷ ರೂ. ಪ್ರೋತ್ಸಾಹ ಧನ ಘೋಷಿಸಿದರು.‌

ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಗೋಂವಿಂದರಾಜು ಅವರ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ಇಬ್ಬರೂ ಕ್ರೀಡಾಪಟುಗಳಿಗೆ ಶುಭಾಶಯ ಕೋರಿದ ಮುಖ್ಯಮಂತ್ರಿಗಳು ರಾಜ್ಯಕ್ಕೆ ಮತ್ತು ದೇಶಕ್ಕೆ ಉತ್ತಮ ಹೆಸರು ತರುವ ನಿಟ್ಟಿನಲ್ಲಿ ಇನ್ನಷ್ಟು ಸಾಧನೆ ಮಾಡುವಂತೆ ಹಾರೈಸಿದರು.

ಇಬ್ಬರೂ ಪಟುಗಳಿಗೆ ತಲಾ ಐದು ಲಕ್ಷದ ಚೆಕ್ ವಿತರಿಸುವಂತೆ ಸರ್ಕಾರದ ಅಪರ ಮುಖ್ಯಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ. ಪ್ರಭಾಕರ್, ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯದರ್ಶಿ ರಾಜೇಶ್ ಮತ್ತು ತರಬೇತುದಾರರಾದ ಬಿ.ಎನ್. ಸುಧಾಕರ್ ಉಪಸ್ಥಿತರಿದ್ದರು.

Previous articleಬೆಂಗಳೂರಿಗರೆ ವೀಕೆಂಡ್ ಪ್ಲ್ಯಾನ್ ರೆಡಿ ಮಾಡಿ: ಕಬ್ಬನ್‌ ಪಾರ್ಕ್‌ನಲ್ಲಿ ಅರಳಿದ ಹೂವಿನ ಲೋಕ!
Next articleದೆಹಲಿ ಬುಲಾವ್ ಬಗ್ಗೆ ಡಿಕೆಶಿ ಹೇಳಿದ್ದೇನು? ಮುಂಬೈ ಪ್ರಯಾಣದ ಅಸಲಿಯತ್ತೇನು?

LEAVE A REPLY

Please enter your comment!
Please enter your name here