ಬೀದರ್: ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ಶಾಲೆಯ ಮಹಡಿ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ನಡೆದಿದೆ.
ವಿದ್ಯಾರ್ಥಿನಿ ಮದಿಯಾ ನಶೀರ್ ಪಾಷಾ (16) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಈಕೆಗೆ ಸಹಪಾಠಿ ಪ್ರೀತಿ ಮಾಡುವಂತೆ ಪೀಡಿಸುತ್ತಿದ್ದರಿಂದ ಆಕೆಯ ಮೇಲೆ ಮಾನಸಿಕ ಒತ್ತಡ ಉಂಟಾಗಿದೆ ಎನ್ನಲಾಗಿದೆ. ಆದರೆ ಪೊಲೀಸ್ ವರದಿ ಪ್ರಕಾರ, ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ.
ಈ ಕುರಿತು ಭೆಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ನಡೆಸಿದ್ದಾರೆ.























