ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕಟಿಸಿರುವ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದ್ದು, ಬೆಂಗಳೂರು ಜಲಮಂಡಲಿಯ (BWSSB) ಸಿವಿಲ್, ಎಲೆಕ್ಟ್ರಿಕಲ್ ಮತ್ತು ಮೆಕ್ಯಾನಿಕಲ್ ವಿಭಾಗದ ಕಿರಿಯ ಎಂಜಿನಿಯರ್ ಹುದ್ದೆಗಳ ನೇಮಕಾತಿಗೆ ನಡೆದಿರುವ ಲಿಖಿತ ಪರೀಕ್ಷೆಯನ್ನು ಡಿಸೆಂಬರ್ 20ರಿಂದ ಡಿಸೆಂಬರ್ 22ಕ್ಕೆ ಮುಂದೂಡಲಾಗಿದೆ.
ಈ ಕುರಿತು ಅಧಿಕೃತ ಆದೇಶ ಹೊರಡಿಸಲಾಗಿದ್ದು. KEA ನ ನವೆಂಬರ್ 19ರ ವೇಳಾಪಟ್ಟಿಯಂತೆ ಇತರ ಹುದ್ದೆಗಳ ಪರೀಕ್ಷೆಗಳು ನಿಗದಿತ ದಿನಾಂಕಗಳಲ್ಲೇ ನಡೆಯಲಿದ್ದು, ಯಾವುದೇ ಬದಲಾವಣೆಯಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಪರೀಕ್ಷೆ ಬೆಂಗಳೂರು ನಗರದಲ್ಲಿ ಮಾತ್ರ ನಡೆಸಲಾಗುತ್ತಿದ್ದು ಪ್ರವೇಶಪತ್ರದೊಂದಿಗೆ ಅಭ್ಯರ್ಥಿಗಳು ಕಡ್ಡಾಯವಾಗಿ ಸರ್ಕಾರ ಮಾನ್ಯತೆ ಪಡೆದ ಗುರುತಿನ ಚೀಟಿ ತರಬೇಕು. ಪರೀಕ್ಷಾ ಕೇಂದ್ರಗಳ ಪ್ರವೇಶದ್ವಾರದಲ್ಲಿ ಫಿಸ್ಕಿಂಗ್ ಕ್ರಮ ಹಾಗೂ ಭದ್ರತಾ ಪರಿಶೀಲನೆ ಕಡ್ಡಾಯ. ಎಲೆಕ್ಟ್ರಾನಿಕ್ ಸಾಧನಗಳು, ಸ್ಮಾರ್ಟ್ ವಾಚ್, ಬ್ಲೂಟೂತ್, ನೋಟ್ ಪೇಡ್, ಕ್ಯಾಲ್ಕ್ಯುಲೇಟರ್ ಇತ್ಯಾದಿ ಆಯ್ದ ವಸ್ತುಗಳನ್ನು ತರಲು ನಿಷೇಧಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪರೀಕ್ಷಾರ್ಥಿಗಳು KEA ಅಧಿಕೃತ ವೆಬ್‌ಸೈಟ್ kea.kar.nic.in ಅನ್ನು ನಿಯಮಿತವಾಗಿ ಪರಿಶೀಲಿಸುವುದು ಉತ್ತಮ ಎಂದು ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ, IAS ತಿಳಿಸಿದ್ದಾರೆ.










