SK Home Ad
Home ನಮ್ಮ ಜಿಲ್ಲೆ ಚಾಮರಾಜನಗರ ಬಜೆಟ್‌ ಮೀರಿ ಕಾಮಗಾರಿ: ಬಿಜೆಪಿ ಸರ್ಕಾರದ ವಿರುದ್ಧ ಸಿಎಂ ವಾಗ್ದಾಳಿ

ಬಜೆಟ್‌ ಮೀರಿ ಕಾಮಗಾರಿ: ಬಿಜೆಪಿ ಸರ್ಕಾರದ ವಿರುದ್ಧ ಸಿಎಂ ವಾಗ್ದಾಳಿ

0
7

ಚಾಮರಾಜನಗರ: ಯಡಿಯೂರಪ್ಪನವರು ಬಜೆಟ್ ಮೀರಿ ಯೋಜನೆಗಳ ಕಾಮಗಾರಿ ಪ್ರಾರಂಭಿಸಿದ್ದರು. ಬಿಜೆಪಿ ಸರ್ಕಾರಗಳ ಇಂತಹ ಅನಾಹುತಗಳಿಂದಾಗಿಯೇ ಆರ್ಥಿಕ ಇಲಾಖೆಯವರು ನಮಗೆ ಪತ್ರ ಬರೆದಿದ್ದಾರೆ ಎಂದು ತಿಳಿಸಿದರು.

ಚಾಮರಾಜನಗರ ಜಿಲ್ಲೆಯ ಹನೂರಿನ ಕೆಎಚ್‌ಬಿ ಹೆಲಿಪ್ಯಾಡ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಸರ್ಕಾರದ ಅವಧಿಯಲ್ಲಿ ಕೊಟ್ಟ ಕೆಲಸಗಳು ಮುಗಿಯುತ್ತಿದ್ದು, ಬಿಲ್ ನೀಡಬೇಕಾಗಿದೆ. ನಾನು ಅದರ ಬಗ್ಗೆ ಆಲೋಚನೆ ಮಾಡುವೆ. ಗುತ್ತಿಗೆದಾರರು ಉಳಿಯಬೇಕು. ಹೀಗಾಗಿ ಸದ್ಯದಲ್ಲೇ ಆಲೋಚನೆ ಮಾಡುತ್ತೇನೆ ಎಂದರು.

490 ಕೋಟಿ ಮೊತ್ತದ ನೀರಾವರಿ ಯೋಜನೆ ಶಂಕುಸ್ಥಾಪನೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಬೇಕು. ಅನೇಕ ಸಮಿತಿಗಳಿದ್ದು, ಅಲ್ಲೂ ಚರ್ಚೆಯಾಗಬೇಕು. ನಂತರ ಮಂಡಳಿಗಳಲ್ಲಿ ಅನುಮತಿ ಪಡೆದು, ಸಚಿವ ಸಂಪುಟ ಅನುಮತಿ ಪಡೆದು ಟೆಂಡರ್ ಕರೆಯಬೇಕು. ಆ ಬಳಿಕ ಕಾಮಗಾರಿ ಆರಂಭಿಸಲಾಗುವುದು. ಇದಕ್ಕೆ ಆದ ಪ್ರಕ್ರಿಯೆಗಳಿವೆ ಎಂದು ವಿವರಿಸಿದರು.

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಮರುಪರಿಶೀಲನೆ ವೇಳೆ ಜಾತಿ ಪ್ರಮಾಣಪತ್ರ ಕೇಳುತ್ತಿರುವ ಬಗ್ಗೆ ಕೇಳಿದಾಗ, “ಹೊರ ರಾಜ್ಯದವರು ಇಲ್ಲಿ ಯೋಜನೆ ಪಡೆಯುತ್ತಿದ್ದಾರೆ ಎಂಬ ಕಾರಣಕ್ಕೆ ನಾವು ಹೊಸ ಅರ್ಜಿ ಸಿದ್ಧಪಡಿಸಿದ್ದೇವೆ. ಯಾರು ನಮ್ಮ ಮತದಾರರು, ಅರ್ಹರಿದ್ದಾರೆ ಅವರನ್ನು ಪರಿಗಣಿಸಲಾಗುವುದು. ಇನ್ನು ನಾವು ಮರುಪರಿಶೀಲನೆ ಅರ್ಜಿ ವಿತರಣೆ ಮಾಡಿಲ್ಲ” ಎಂದು ತಿಳಿಸಿದರು.