Home ನಮ್ಮ ಜಿಲ್ಲೆ ಚಾಮರಾಜನಗರ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಕೇಂದ್ರ ಸರ್ಕಾರದಿಂದಲೇ ಅನ್ಯಾಯ

ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಕೇಂದ್ರ ಸರ್ಕಾರದಿಂದಲೇ ಅನ್ಯಾಯ

0

ಸಂ.ಕ.ಸಮಾಚಾರ ಚಾಮರಾಜನಗರ: ಕೇಂದ್ರ ಸರ್ಕಾರವೇ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಅನ್ಯಾಯವೆಸಗಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್‌ಸಿ ಮಹದೇವಪ್ಪ ಆರೋಪಿಸಿದರು.
ಮಲೈ ಮಹದೇಶ್ವರ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಎಸ್‌ಸಿಪಿ ಟಿಎಸ್‌ಪಿ ಯೋಜನೆಗಳಿಗೆ 12 ಲಕ್ಷ ಕೋಟಿ ಬದಲು ಕೇವಲ 60 ಸಾವಿರ ಕೋಟಿ ನೀಡಿದೆ. ಈ ಅನ್ಯಾಯದ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಪ್ರಶ್ನಿಸಬೇಕು ಎಂದು ಕಿಡಿಕಾರಿದರು.
ಕೇಂದ್ರ ಸರ್ಕಾರದಲ್ಲಿ 94 ಸಾವಿರ ಬ್ಯಾಕ್‌ಲಾಗ್ ಹುದ್ದೆಗಳು ಖಾಲಿ ಇವೆ. ಇದನ್ನೆಲ್ಲಾ ಪ್ರಶ್ನಿಸುವುದನ್ನು ಬಿಟ್ಟು ನಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ನಾವು ಎಸ್‌ಸಿಪಿ ಟಿಎಸ್‌ಪಿ ಕಾಯ್ದೆ ಮಾಡಿದ್ದೇವೆ. ಗ್ಯಾರಂಟಿ ಯೋಜನೆಗಳಿಗೆ ಸಾರ್ವಜನಿಕವಾಗಿ ಎಸ್‌ಸಿಪಿ, ಟಿಎಸ್‌ಪಿ ಹಣ ಬಳಸಲು ಸಾಧ್ಯವಿಲ್ಲ, ಬಳಸೋದು ಇಲ್ಲ ಎಂದು ತಿಳಿಸಿದರು.

Exit mobile version