Home Advertisement
Home ನಮ್ಮ ಜಿಲ್ಲೆ ಚಿಕ್ಕಬಳ್ಳಾಪುರ ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟ ಬೆಂಬಲಿಸಿ: ಸಿಎಂ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟ ಬೆಂಬಲಿಸಿ: ಸಿಎಂ ಕರೆ

0
31

ಚಿಕ್ಕಬಳ್ಳಾಪುರ: ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಚಿಕ್ಕಬಳ್ಳಾಪುರದಲ್ಲಿ ನಡೆದ ನರೇಗಾ ಬಚಾವ್ ಆಂದೋಲನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶಾದ್ಯಂತ ‘ಮನರೇಗಾ ಉಳಿಸಿ’ ಅಭಿಯಾನ ಪ್ರಾರಂಭಿಸಲಾಗಿದೆ. ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಭಾಜಪ ಸರ್ಕಾರ ಮನರೆಗಾವನ್ನು ರದ್ದುಪಡಿಸಿ, ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಜಾರಿ ಮಾಡಿದೆ. ಮನರೇಗಾದ ರದ್ದು ಅಗತ್ಯವಿರಲಿಲ್ಲ. ಕೂಲಿಕಾರರು, ಆದಿವಾಸಿಗಳು, ಸಣ್ಣ ರೈತರಿಗೆ, ಮಹಿಳೆಯರಿಗೆ ಉದ್ಯೋಗದ ಅನುಕೂಲ ಕಲ್ಪಿಸುವ ದಿಸೆಯಲ್ಲಿ 2005ರಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ, ನಾಯಕಿ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಈ ಕಾಯ್ದೆ ಜಾರಿಯಾಯಿತು. ಇದೇ ಕಾಯ್ದೆಯಲ್ಲದೇ, ಶಿಕ್ಷಣ, ಆಹಾರ, ಮಾಹಿತಿ ಹಕ್ಕು ಸೇರಿದಂತೆ ಹಲವು ಜನಪರ ಕಾಯ್ದೆಗಳನ್ನು ಜಾರಿಗೆ ತಂದಿದ್ದರು. ಆದರೆ ಈ ಎಲ್ಲ ಜನಪರ ಕಾಯ್ದೆಗಳನ್ನು ದುರ್ಬಲಗೊಳಿಸುವ ಕೆಲಸವನ್ನು ಮೋದಿಯವರ ನೇತೃತ್ವದ ಸರ್ಕಾರ ಮಾಡುತ್ತಿದೆ ಎಂದರು.

ಇದನ್ನೂ ಓದಿ: ಹಂಪಿ ಕನ್ನಡ ವಿಶ್ವವಿದ್ಯಾಲಯ: 3 ಜನ ಸಾದಕರಿಗೆ ನಾಡೋಜ ಪ್ರಕಟ

ಮನರೇಗಾ ಅಡಿ 12.16 ಕೋಟಿ ಜನರಿಗೆ ಉದ್ಯೋಗ: ಸದನದಲ್ಲಿ ಕೇವಲ 8 ಗಂಟೆಗಳ ಕಾಲ ಚರ್ಚೆ ಮಾಡಿದ ಕೇಂದ್ರ ಸರ್ಕಾರ, ನಂತರ ಹೊಸ ಕಾಯ್ದೆಯನ್ನು ಜಾರಿಗೆ ತಂದರು. ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಜೀವಿಕ ಮಿಷನ್ ಗ್ರಾಮೀಣ ಕಾಯ್ದೆ, 12.16 ಕೋಟಿ ಜನರು ಕೆಲಸ ಪಡೆಯುತ್ತಿದ್ದರು. ಇದರಲ್ಲಿ ಸುಮಾರು 53 % ಉದ್ಯೋಗ ಪಡೆಯುತ್ತಿದ್ದರು. ಅಲ್ಲದೇ ಪರಿಶಿಷ್ಟ ಜಾತಿಯ 17% ಮತ್ತು ಪರಿಶಿಷ್ಟ ವರ್ಗದ 11% ಜನರು ಉದ್ಯೋಗ ಪಡೆಯುತ್ತಿದ್ದರು. ಈ ಎಲ್ಲ ಜನರ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ ಎಂದರು.

ಗ್ರಾಮಸ್ವರಾಜ್ಯ ಪರಿಕಲ್ಪನೆಗೆ ಶಕ್ತಿ ತುಂಬಿದ್ದ ಮನರೇಗಾ: ಮನರೇಗಾ ಕಾಯ್ದೆಗೆ ಗ್ರಾಮೀಣಾಭಿವೃದ್ಧಿಯ ಕನಸು ಕಂಡಿದ್ದ ಮಹಾತ್ಮಾ ಗಾಂಧಿಯವರ ಹೆಸರನ್ನು ಇಡಲಾಗಿತ್ತು. ಅವರ ಗ್ರಾಮ ಸ್ವರಾಜ್ಯದ ಕಲ್ಪನೆಗೆ ಮನರೇಗಾ ಶಕ್ತಿ ತುಂಬಿತ್ತು. 100 ದಿನಗಳ ಉದ್ಯೋಗದ ಖಾತ್ರಿ ನೀಡುತ್ತಿದ್ದ ಮನರೇಗಾ ಕಾಯ್ದೆಯಡಿ, ಕೂಲಿಕಾರರು ತಮ್ಮ ಸ್ಥಳೀಯ ಮಟ್ಟದಲ್ಲಿಯೇ ಕೆಲಸ ಮಾಡಬಹುದಿತ್ತು. ಗ್ರಾಮ ಪಂಚಾಯತಿ ಮತ್ತು ಗ್ರಾಮ ಸಭೆಗಳು ನಿರ್ಧರಿಸುವ ಅಧಿಕಾರವಿತ್ತು. ಆದರೀಗ ಈ ನಿರ್ಧಾರವನ್ನು ಕೇಂದ್ರ ಸರ್ಕಾರವೇ ಕೈಗೊಳ್ಳಲಿದೆ. ಕೇಂದ್ರದ ಅನುದಾನ, ಅನುಮತಿ ಇಲ್ಲದೇ, ಇಲ್ಲಿನ ಗ್ರಾಮ ಪಂಚಾಯತಿಯಲ್ಲಿ ಕೆಲಸವಾಗಲು ಸಾಧ್ಯ. ಆದ್ದರಿಂದ ಮನರೇಗಾವನ್ನು ಮುಂದುವರೆಸಬೇಕೆಂಬುದು ಕಾಂಗ್ರೆಸ್ ಸರ್ಕಾರದ ಒತ್ತಾಯವಾಗಿದೆ. ಮನರೇಗಾದಲ್ಲಿ 100 ದಿನ ಭತ್ಯೆಯನ್ನು ತಪ್ಪದೇ ಕೊಡಲಾಗುತ್ತಿತ್ತು. ಹೊಸ ಕಾಯ್ದೆಯಂತೆ ಕೇಂದ್ರ 60% ಅನುದಾನ ಮತ್ತು ರಾಜ್ಯಗಳು 40% ಅನುದಾನ ಕೊಡಬೇಕಾಗಿದೆ. ರಾಜ್ಯದ ಹಿತವನ್ನು ಕಾಪಾಡುವಲ್ಲಿ ಕೇಂದ್ರ ಸೋತಿದೆ. ಅದ್ದರಿಂದ ವಿಬಿ ಜಿ ರಾಮ್ ಜಿ ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸಲು ದೇಶಾದ್ಯಂತ ಕಾಂಗ್ರೆಸ್ ಹೋರಾಟ ಮಾಡುತ್ತಿದೆ ಎಂದರು.

ಇದನ್ನೂ ಓದಿ: ‘ಗುಲಾಮಗಿರಿಯ ಸಂಕೇತಗಳಿಂದ ಮುಕ್ತಿ’: ರಾಜಾಜಿ ಪ್ರತಿಮೆ ಇಂದು ರಾಷ್ಟ್ರಪತಿ ಭವನದಲ್ಲಿ ಅನಾವರಣ

ಬೇಡಿಕೆ ಈಡೇರುವವರೆಗೂ ಹೋರಾಟ: ವಿಬಿ ಜಿ ರಾಮ್ ಜಿ ಯೋಜನೆಯನ್ನು ಸಂಪೂರ್ಣವಾಗಿ ರದ್ದುಪಡಿಸಿ, ಮನರೇಗಾ ಮರು ಜಾರಿಗೊಳಿಸಬೇಕು. ಜನರ ಉದ್ಯೋಗದ ಹಕ್ಕನ್ನು ಮರುಸ್ಥಾಪಿಸಬೇಕು. ಪಂಚಾಯತ್ ಸ್ವಯಂ ಆಡಳಿತದ ಹಕ್ಕು ಮರುಸ್ಥಾಪನೆ, ದಿನಕ್ಕೆ 400 ರೂ.ಗಳ ಕನಿಷ್ಠ ವೇತನವನ್ನು ದೇಶಾದ್ಯಂತ ನೀಡಬೇಕು. ಈ ಬೇಡಿಕೆಗಳು ಈಡೇರುವವರೆಗೆ ನಮ್ಮ ಆಂದೋಲನ ನಿಲ್ಲುವುದಿಲ್ಲ ಎಂದರು.

ರೈತ ವಿರೋಧಿ ಕಾಯ್ದೆಗಳನ್ನು ಹೋರಾಟದ ಫಲವಾಗಿ ರದ್ದುಗೊಳಿಸಲಾಯಿತು. ಅದೇ ರೀತಿಯಲ್ಲಿ ಈ ಹೋರಾಟ ನಿಲ್ಲುವುದಿಲ್ಲ. ಈ ಹೋರಾಟಕ್ಕೆ ರಾಜ್ಯದ ಜನರೆಲ್ಲರೂ ನಮ್ಮ ಜೊತೆಯಾಗಬೇಕು. ಹಳ್ಳಿಗಾಡಿನ ಜನರಿಗೆ ಅನುಕೂಲ ಕಲ್ಪಿಸುವ ಮನರೇಗಾ ಯೋಜನೆಯ ಮರುಸ್ಥಾಪಿಸುವ ಕಾಂಗ್ರೆಸ್‌ನ ಸಾರ್ಥಕ ಉದ್ದೇಶಕ್ಕೆ ಜನರು ಬೆಂಬಲಿಸಬೇಕು.

Previous articleಹುಬ್ಬಳ್ಳಿಯಲ್ಲಿ ರಣಜಿ ಟ್ರೋಫಿ ಫೈನಲ್ ಜ್ವರ: ಕರ್ನಾಟಕ–ಜಮ್ಮು ಕಾಶ್ಮೀರ ಮುಖಾಮುಖಿ
Next articleಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ