Home Advertisement
Home ನಮ್ಮ ಜಿಲ್ಲೆ ಚಿಕ್ಕಮಗಳೂರು ಚಿಕ್ಕಮಗಳೂರು: ಸ್ನೇಹಿತನ ಮದುವೆಗೆ ಬಂದಿದ್ದ ಬೆಂಗಳೂರಿನ ಐಟಿ ಉದ್ಯೋಗಿ ನದಿಯಲ್ಲಿ ಮುಳುಗಿ ಸಾವು

ಚಿಕ್ಕಮಗಳೂರು: ಸ್ನೇಹಿತನ ಮದುವೆಗೆ ಬಂದಿದ್ದ ಬೆಂಗಳೂರಿನ ಐಟಿ ಉದ್ಯೋಗಿ ನದಿಯಲ್ಲಿ ಮುಳುಗಿ ಸಾವು

0
91

ಚಿಕ್ಕಮಗಳೂರು: ಸ್ನೇಹಿತನ ಮದುವೆ ಸಮಾರಂಭಕ್ಕೆ ಹಾಜರಾಗಲು ಬಂದಿದ್ದ ಐಟಿ ಉದ್ಯೋಗಿಯೊಬ್ಬರು ನದಿಯಲ್ಲಿ ಈಜಲು ತೆರಳಿದ ವೇಳೆ ನೀರು ಪಾಲಾದ ದುರ್ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಬನ್ನೂರು ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಗದಗ ಮೂಲದ 27 ವರ್ಷದ ಅಭಿಷೇಕ್ ಎಂದು ಗುರುತಿಸಲಾಗಿದೆ. ಅವರು ಬೆಂಗಳೂರಿನ ಖಾಸಗಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಮಾಹಿತಿಯ ಪ್ರಕಾರ, ಅಭಿಷೇಕ್ ತಮ್ಮ ಸ್ನೇಹಿತನ ಮದುವೆಗೆ ಸ್ನೇಹಿತರೊಂದಿಗೆ ಬನ್ನೂರು ಗ್ರಾಮಕ್ಕೆ ಬಂದಿದ್ದು, ಹೋಂಸ್ಟೇನಲ್ಲಿ ವಾಸ್ತವ್ಯ ಹೂಡಿದ್ದರು. ಭಾನುವಾರ ಸ್ನೇಹಿತರೊಂದಿಗೆ ಸಮೀಪದ ಭದ್ರಾ ನದಿಗೆ ಈಜಲು ತೆರಳಿದ ವೇಳೆ ಅಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಶೋಧ ಕಾರ್ಯಾಚರಣೆ ಆರಂಭಿಸಿದರು. ಹಲವು ಗಂಟೆಗಳ ತೀವ್ರ ಹುಡುಕಾಟದ ಬಳಿಕ ಅಭಿಷೇಕ್ ಅವರ ಮೃತದೇಹವನ್ನು ನದಿಯಿಂದ ಹೊರತೆಗೆದಿದ್ದಾರೆ.

ಈ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.