SK Home Ad
Home ನಮ್ಮ ಜಿಲ್ಲೆ ಚಿಕ್ಕಮಗಳೂರು ಕಾಫಿನಾಡಿನಲ್ಲಿ ಕಾಡಾನೆ ಅಟ್ಟಹಾಸಕ್ಕೆ ಮತ್ತೊಬ್ಬ ರೈತ ಬಲಿ

ಕಾಫಿನಾಡಿನಲ್ಲಿ ಕಾಡಾನೆ ಅಟ್ಟಹಾಸಕ್ಕೆ ಮತ್ತೊಬ್ಬ ರೈತ ಬಲಿ

0
5

ಚಿಕ್ಕಮಗಳೂರು: ಕಾಡಾನೆ ದಾಳಿಗೆ ರೈತ ಮೃತಪಟ್ಟಿರುವ ಘಟನೆ ಎನ್.ಆರ್. ಪುರ ತಾಲೂಕಿನ ಬಾಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆನ್ನಂಗಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹೆನ್ನಂಗಿ ಗ್ರಾಮದ ಕೃಷ್ಣಮೂರ್ತಿ (54) ಎಂದು ಗುರುತಿಸಲಾಗಿದೆ.

ಕೃಷ್ಣಮೂರ್ತಿ ಅವರು ದನ ಹುಡುಕಿಕೊಂಡು ತೆರಳಿದ್ದ ವೇಳೆ ಕಾಡಾನೆ ಎದುರಾಗಿ ದಾಳಿ ನಡೆಸಿದೆ ಎನ್ನಲಾಗಿದೆ. ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ.

ಘಟನೆ ಎನ್.ಆರ್. ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾಡಾನೆಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದೆ. ರೈತರ ಸುರಕ್ಷತೆ ಹಾಗೂ ಕಾಡಾನೆಗಳ ನಿಯಂತ್ರಣಕ್ಕೆ ಅರಣ್ಯ ಇಲಾಖೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಕಾಫಿನಾಡಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ: ಬೇಲೂರು ಭಾಗದಲ್ಲಿ ಕಾಡಾನೆ ದಾಳಿಯ ಘಟನೆ ನಡೆದ ಬೆನ್ನಲ್ಲೇ ಚಿಕ್ಕಮಗಳೂರು ಜಿಲ್ಲೆಯಲ್ಲೂ ರೈತರೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.