Home ನಮ್ಮ ಜಿಲ್ಲೆ ಚಿಕ್ಕಮಗಳೂರು ಚಿಕ್ಕಮಗಳೂರು: ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್‌ ಶವ ಪತ್ತೆ

ಚಿಕ್ಕಮಗಳೂರು: ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್‌ ಶವ ಪತ್ತೆ

0

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಹತ್ತು ದಿನಗಳಿಂದ ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಶರತ್ ಶವವಾಗಿ ಪತ್ತೆಯಾಗಿದ್ದಾರೆ. ಕಡೂರು ತಾಲೂಕಿನ ಸಖರಾಯಪಟ್ಟಣದ ನೀಲಗಿರಿ ಪ್ಲಾಂಟೇಶನ್ ನಲ್ಲಿ ಶರತ್ (33) ಮೃತದೇಹ ಪತ್ತೆಯಾಗಿದೆ.

ಫಾರೆಸ್ಟ್ ಗಾರ್ಡ್ ಶರತ್ ಮೂಲತಃ ಕೊಡಗು ಜಿಲ್ಲೆಯ ಕಾಲೋನಿಯ ನಿವಾಸಿಯಾಗಿದ್ದು, ಶರತ್‌ಗಾಗಿ 10 ದಿನಗಳಿಂದ ಅರಣ್ಯ ಸಿಬ್ಬಂದಿ ಮತ್ತು ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರು.

ನಾಪತ್ತೆಯಾಗಿದ್ದ ಕುರಿತು ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಇದೀಗ ನೀಲಗಿರಿ ಪ್ಲಾಂಟೇಶನ್‌ನಲ್ಲಿ ಶವವಾಗಿ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

Exit mobile version