ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಭಾಗಕ್ಕೆ ಡಿಸೆಂಬರ್ 1 ರಿಂದ 4ರ ವರೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ದತ್ತಪೀಠದಲ್ಲಿ ದತ್ತ ಜಯಂತಿ ಹಿನ್ನೆಲೆಯಲ್ಲಿ ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಗಾಳಿಕೆರೆ ಮಾಣಿಕ್ಯಧಾರಕ್ಕೆ ಪ್ರವಾಸಿಗರಿಗೆ ಡಿಸೆಂಬರ್ 1 ರಿಂದ ನಾಲ್ಕು ದಿನ ನಿರ್ಬಂಧ ಹೇರಲಾಗಿದೆ.
ವಿಶ್ವಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ಡಿಸೆಂಬರ್ 2 ರಿಂದ 4ರ ವರೆಗೆ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ದತ್ತ ಜಯಂತಿ ಉತ್ಸವ ನಡೆಯಲಿದೆ.
ದತ್ತ ಜಯಂತಿ ಹಿನ್ನೆಲೆಯಲ್ಲಿ ವಿವಿಧೆಡೆಯಿಂದ ಸಾವಿರಾರು ಮಾಲಾಧಾರಿ ಭಕ್ತರು ಭೇಟಿ ನೀಡುವರು. ಹೀಗಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಡಿ. 1ರ ಬೆಳಿಗ್ಗೆ 6ರಿಂದ ಡಿ. 5ರ ಬೆಳಿಗ್ಗೆ 10 ಗಂಟೆ ತನಕ ನಿರ್ಬಂಧ ಹೇರರಲಾಗಿದ್ದು, ಬಳಿಕ ಮುಳ್ಳಯ್ಯನಗಿರಿ ಭಾಗ ಪ್ರವಾಸಿಗರಿಗೆ ಮುಕ್ತವಾಗಲಿದೆ.


























