Home Advertisement
Home ನಮ್ಮ ಜಿಲ್ಲೆ ಚಿಕ್ಕಮಗಳೂರು ಮದುವೆ ಮುನ್ನ ಗರ್ಭಿಣಿ: ಹಸುಗೂಸಿನ ಕತ್ತು ಹಿಸುಕಿದ ಅಜ್ಜಿ!

ಮದುವೆ ಮುನ್ನ ಗರ್ಭಿಣಿ: ಹಸುಗೂಸಿನ ಕತ್ತು ಹಿಸುಕಿದ ಅಜ್ಜಿ!

0
112

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಹೃದಯವಿದ್ರಾವಕ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ.

ಮದುವೆಯಾಗದ ಮೊಮ್ಮಗಳು ಗರ್ಭಿಣಿಯಾದ ವಿಷಯ ಹೊರಗೆ ತಿಳಿದರೆ ಎಲ್ಲಿ ಗೌರವ ಹೋಗುತ್ತದೆಯೋ ಎಂಬ ಕಾರಣಕ್ಕೆ ನವಜಾತ ಶಿಶು ಜನಿಸಿ ಕೇವಲ ಒಂದೇ ನಿಮಿಷಕ್ಕೆ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ತರೀಕೆರೆ ತಾಲೂಕಿನಲ್ಲಿ ನಡೆದಿದೆ.

ಮದುವೆಗೆ ಮೊದಲೇ ಯುವತಿ ಗರ್ಭಿಣಿಯಾಗಿದ್ದಳು. ಕುಟುಂಬದ ಗೌರವ ದೃಷ್ಟಿಯಿಂದ ಈ ವಿಷಯವನ್ನು ಗುಟ್ಟಾಗಿ ಇಟ್ಟಿದ್ದರು. ಕಳೆದ 15 ದಿನಗಳ ಹಿಂದೆ ಮನೆಯಲ್ಲೇ ಯುವತಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಹೋದರೆ ವಿಷಯ ಜಗಜ್ಜಾಹಿರಾಗುತ್ತದೆ ಎಂಬ ಕಾರಣಕ್ಕೆ ನರ್ಸ್ ಆಗಿದ್ದ ಯುವತಿ ತನ್ನ ತಂದೆ-ತಾಯಿ ಮತ್ತು ಅಜ್ಜಿಯ ಸಹಾಯದಿಂದ ಮನೆಯಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

ಇದನ್ನೂ ಓದಿ: ತುಳು ಭಾಷೆಗೆ ಅಧಿಕೃತ ಸ್ಥಾನಮಾನ: ಆಂಧ್ರಕ್ಕೆ ಭೇಟಿ ನೀಡಿದ ಸಮಿತಿ

ಮಗು ಹುಟ್ಟಿದ ತಕ್ಷಣವೇ ಮನೆಯವರೆಲ್ಲಾ ಸೇರಿ ಹಸುಗೂಸು ಕಣ್ಣು ಬಿಡುವ ಮೊದಲೇ, ಆಕೆಯ ಅಜ್ಜಿ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ನಂತರ ಮಗುವನ್ನು ಬ್ಯಾಗ್‌ನಲ್ಲಿ ತುಂಬಿಕೊಂಡು ಹೋಗಿ, ಜನವಸತಿ ಇಲ್ಲದ ತಿಪ್ಪೆಯ ಗುಂಡಿಯೊಂದರಲ್ಲಿ ಹೂತು ಬಂದಿದ್ದರು ಎನ್ನಲಾಗಿದೆ.

ಈ ಕುರಿತು ಲಕ್ಕವಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.