SK Home Ad
Home ನಮ್ಮ ಜಿಲ್ಲೆ ಚಿಕ್ಕಮಗಳೂರು ಮರು ಎಣಿಕೆ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಟಿ ಡಿ ರಾಜೇಗೌಡ

ಮರು ಎಣಿಕೆ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಟಿ ಡಿ ರಾಜೇಗೌಡ

0
286

ನವದೆಹಲಿ: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದ ಕಾನೂನು ಹೋರಾಟ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಚಲಾವಣೆಯಾದ ಅಂಚೆ ಮತಪತ್ರಗಳ ಮರು ಪರಿಶೀಲನೆ ಮತ್ತು ಮರು ಎಣಿಕೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠದ ಮುಂದೆ ರಾಜೇಗೌಡ ಪರ ಹಿರಿಯ ವಕೀಲ ದೇವದತ್ ಕಾಮತ್ ವಿಚಾರ ಪ್ರಸ್ತಾಪಿಸಿದರು. ಮೇ 11ರಂದು ಪ್ರಕರಣವನ್ನು ತುರ್ತು ವಿಚಾರಣೆಗೆ ಪಟ್ಟಿ ಮಾಡುವಂತೆ ಅವರು ಮನವಿ ಮಾಡಿದರು.

ಶೃಂಗೇರಿ ಕ್ಷೇತ್ರದ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದ ವಿವಾದ ಕಳೆದ ಕೆಲ ತಿಂಗಳಿನಿಂದ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಅಂಚೆ ಮತಪತ್ರಗಳ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೆಟ್ಟಿಲೇರಲಾಗಿತ್ತು.

ಇದೀಗ ಪ್ರಕರಣ ಸುಪ್ರೀಂ ಕೋರ್ಟ್‌ಗೆ ತಲುಪಿರುವುದರಿಂದ ಮುಂದಿನ ಬೆಳವಣಿಗೆಗಳತ್ತ ರಾಜ್ಯ ರಾಜಕೀಯ ವಲಯದ ಗಮನ ನೆಟ್ಟಿದೆ. ಸುಪ್ರೀಂ ಕೋರ್ಟ್‌ನ ಮುಂದಿನ ಆದೇಶವು ಶೃಂಗೇರಿ ಕ್ಷೇತ್ರದ ಚುನಾವಣಾ ಫಲಿತಾಂಶದ ಭವಿಷ್ಯಕ್ಕೆ ಮಹತ್ವದ ತಿರುವಾಗುವ ಸಾಧ್ಯತೆ ಇದೆ.