ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ನೇರಲಗುಂಟೆ ಸಮೀಪ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ನಾಯಕನಹಟ್ಟಿ ಜಾತ್ರೆಗೆ ತೆರಳಿದ್ದ ಇಬ್ಬರು ಯುವಕರು ಚಳ್ಳಕೆರೆಗೆ ಮರಳುವ ವೇಳೆ ಅವರು ಪ್ರಯಾಣಿಸುತ್ತಿದ್ದ ಬೈಕಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಪ್ರಜ್ವಲ್ (22) ಹಾಗೂ ಅಭಿಷೇಕ್ (18) ಎಂಬ ಯುವಕರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಘಟನೆ ನಾಯಕನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.























