Home ನಮ್ಮ ಜಿಲ್ಲೆ ಚಿತ್ರದುರ್ಗ ಚಳ್ಳಕೆರೆ ತಾಲೂಕಿನ ಹೊನ್ನೂರು ಗ್ರಾಮದ ಮನೆ ಕಳ್ಳತನ ಪ್ರಕರಣ ಭೇದಿಸಿದ  ತಳುಕು ಪೊಲೀಸರು: ಓರ್ವ ಆರೋಪಿ ಬಂಧನ,...

ಚಳ್ಳಕೆರೆ ತಾಲೂಕಿನ ಹೊನ್ನೂರು ಗ್ರಾಮದ ಮನೆ ಕಳ್ಳತನ ಪ್ರಕರಣ ಭೇದಿಸಿದ  ತಳುಕು ಪೊಲೀಸರು: ಓರ್ವ ಆರೋಪಿ ಬಂಧನ, ಚಿನ್ನಾಭರಣ ವಶ!

0

ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೊನ್ನೂರು ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ತಳುಕು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಓರ್ವ ಆರೋಪಿಯನ್ನು ಬಂಧಿಸಿ, ಕಳುವಾಗಿದ್ದ ಚಿನ್ನಾಭರಣ ಸೇರಿದಂತೆ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.

40,000 ರೂ ಮೌಲ್ಯದ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದರು. ಈ ಸಂಬಂಧ ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಈ ಪ್ರಮುಖ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಚಳ್ಳಕೆರೆ ಉಪವಿಭಾಗ, ಸತ್ಯನಾರಾಯಣ ರಾವ್ ರವರ ನಿರ್ದೇಶನದಲ್ಲಿ ತನಿಖೆ ಕೈಗೊಳ್ಳಲಾಗಿತ್ತು.

ಪೊಲೀಸ್ ವೃತ್ತ ನಿರೀಕ್ಷಕರಾದ ಹನುಮಂತಪ್ಪ ಎಂ ಶಿರೀಹಳ್ಳಿ ರವರ ನೇತೃತ್ವದಲ್ಲಿ ಪಿ.ಎಸ್.ಐ ಶಿವಕುಮಾರ ಕೆ, ಪ್ರೋ.ಪಿ.ಎಸ್.ಐ ಚೇತನ್, ಎ.ಎಸ್.ಐ ಮಂಜಣ್ಣ ಹಾಗೂ ಸಿಬ್ಬಂದಿಗಳಾದ ನಿತಿನ್ ಕುಮಾರ್, ಜಾಕೀರ್ ಹುಸೇನ್, ಮಂಜುನಾಥ, ಧನಂಜಯ, ಜಗದೀಶ್, ವೀರೇಶ, ಮಾರೇಶ ಮತ್ತು ಪರಶುರಾಂಪುರ ಠಾಣೆಯ ಪಿ.ಎಸ್.ಐ ಮಾರುತಿ ಹಾಗೂ ಸಿಬ್ಬಂದಿಗಳಾದ ಏಕಾಂತರೆಡ್ಡಿ, ಮಂಜುನಾಥ ಮುಡಕೆ ರವರನ್ನು ಒಳಗೊಂಡ ವಿಶೇಷ ತಂಡವನ್ನು ರಚಿಸಲಾಗಿತ್ತು.

ತನಿಖಾ ತಂಡವು ತ್ವರಿತಗತಿಯಲ್ಲಿ ಕಾರ್ಯಚರಣೆ ನಡೆಸಿ, ಪ್ರಕರಣದ ಆರೋಪಿಯಾದ ಆಂಧ್ರಪ್ರದೇಶ ರಾಜ್ಯದ ಸತ್ಯಸಾಯಿ ಜಿಲ್ಲೆಯ ಧರ್ಮಾವರಂ ಟೌನ್, ಕೇತಿರೆಡ್ಡಿ ಕಾಲೋನಿಯ ವಾಸಿ, ಪೆಂಟಿಂಗ್ ಕೆಲಸ ಮಾಡುವ ಶೇಖ್ ಖಾಜಾಪೀರ್ (32) ಎಂಬಾತನನ್ನು ದಸ್ತಗಿರಿ ಮಾಡಿದೆ. ಆರೋಪಿಯಿಂದ ತಳಕು ಪೊಲೀಸ್ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳುವಾಗಿದ್ದ ರೂ 70,000, ಬೆಲೆಬಾಳುವ ಬಂಗಾರದ ಆಭರಣಗಳು ಹಾಗೂ 2,000 ರೂ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ಇದರ ಜೊತೆಗೆ, ಆರೋಪಿಯಿಂದ ಪರಶುರಾಂಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮತ್ತೊಂದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಸುಮಾರು 3,50,000 ರೂಪಾಯಿ ಬೆಲೆಬಾಳುವ 27 ಗ್ರಾಂ ಚಿನ್ನಾಭರಣವನ್ನೂ ಸಹ ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಒಟ್ಟಾರೆಯಾಗಿ, ಪೊಲೀಸರು ಸುಮಾರು 4.22 ರೂ ಲಕ್ಷ ಮೌಲ್ಯದ ಕಳವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪ್ರಕರಣದ ಮುಂದಿನ ಕ್ರಮ ಕೈಗೊಳ್ಳಲಾಗಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version