Home ನಮ್ಮ ಜಿಲ್ಲೆ ಚಿತ್ರದುರ್ಗ ಚಿತ್ರದುರ್ಗದಲ್ಲಿ ಕೆಲಸ ಖಾಲಿ ಇದೆ, ಗೌರವಧನದ ವಿವರಗಳು

ಚಿತ್ರದುರ್ಗದಲ್ಲಿ ಕೆಲಸ ಖಾಲಿ ಇದೆ, ಗೌರವಧನದ ವಿವರಗಳು

0

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಚಿತ್ರದುರ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಅರೇ ಕಾಲಿಕ ಕಾನೂನು ಸ್ವಯಂ ಸೇವಕರಾಗಿ (Para Legal Volunteers) ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಮಾಡಲು ಅಕ್ಟೋಬರ್ 8 ಕೊನೆಯ ದಿನವಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು, ಪ್ರಾಧ್ಯಾಪಕರು, ಪಂಚಾಯಿತಿ ಸದಸ್ಯರು, ವಿವಿಧ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸಿರುವ ನಿವೃತ್ತ ಸರ್ಕಾರಿ ನೌಕರರು, ಸಾಮಾಜಿಕ ಸೇವಾ ಮನೋಭಾವ ಇರುವ ಕಾರ್ಯಕರ್ತರು, ಮಹಿಳೆಯರು, ಮಂಗಳಮುಖಿಯರು, ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಬಹುದು.

ಅಲ್ಲದೇ ಎಂಎಸ್‍ಡಬ್ಲ್ಯೂ ವಿದ್ಯಾರ್ಥಿ ಹಾಗೂ ಪ್ರಾಧ್ಯಾಪಕರು, ಅಂಗನವಾಡಿ ಕಾರ್ಯಕರ್ತೆಯರು, ವೈದ್ಯರು, ಕಾನೂನು ವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ನಿವೃತ್ತ ಸೈನಿಕರು, ಸೈನಿಕರ ಕುಟುಂಬದ ಸದಸ್ಯರು, ವಿವಿಧ ಸಂಘಟನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಸೇವಾ ಮನೋಭಾವ ಹೊಂದಿರುವ ಪುರುಷ ಮತ್ತು ಮಹಿಳೆಯರು, ಮಂಗಳಮುಖಿಯರು, ಸನ್ನಡತೆ ಹೊಂದಿದ ಕಾರಾಗೃಹ ಬಂದಿಗಳು ಮತ್ತು ಸ್ವ ಸಹಾಯ ಸಂಘಗಳ ಸದಸ್ಯರು ಅರ್ಜಿ ಸಲ್ಲಿಸಬಹುದು.

ಅರೇ ಕಾಲಿಕ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ನೇಮಕ ಮಾಡಿಕೊಳ್ಳಬೇಕಾಗಿರುವುದರಿಂದ ಸೇವಾ ಮನೋಭಾವನೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿಗದಿತ ಅರ್ಜಿ ನಮೂನೆಯನ್ನು ಪಡೆದುಕೊಂಡು ಅದನ್ನು ಭರ್ತಿ ಮಾಡಿ ಅಕ್ಟೋಬರ್ 8ರ ಸಂಜೆ 5ರ ಅವಧಿಯ ಒಳಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಖುದ್ದಾಗಿ ಸಲ್ಲಿಸಬೇಕು.

ಕಳೆದ ವರ್ಷದಲ್ಲಿ ಅರೇ ಕಾಲಿಕ ಕಾನೂನು ಸ್ವಯಂ ಸೇವಕರಾಗಿ ನೇಮಕಗೊಂಡು ಮುಂದಿನ ವರ್ಷಕ್ಕೆ ಕರ್ತವ್ಯ ನಿರ್ವಹಿಸಲು ಆಸಕ್ತರಿರುವವರು ಒಪ್ಪಿಗೆ ಪತ್ರವನ್ನು ಮೇಲೆ ಹೇಳಿದ ದಿನಾಂಕದೊಳಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಚಿತ್ರದುರ್ಗ ಇಲ್ಲಿಗೆ ಸಲ್ಲಿಸಲು ಸೂಚಿಸಲಾಗಿದೆ.

ಈ ಹುದ್ದೆಗೆ ಯಾವುದೇ ರೀತಿಯಾದ ವೇತನ ಇರುವುದಿಲ್ಲ. ರಾಜ್ಯ ಕಾನೂನು ಸೇವಾ ಪ್ರಾಧಿಕಾರರವರ ನಿರ್ದೇಶನದಂತೆ ಯಾವುದಾದರೂ ಕಾನೂನು ಸೇವಾ ಕೇಂದ್ರಗಳಿಗೆ ಅರೇ ಕಾಲಿಕ ಕಾನೂನು ಸ್ವಯಂ ಸೇವಕರಾಗಿ ನೇಮಿಸಿದ್ದಲ್ಲಿ ಪ್ರತಿ ಕೆಲಸದ ದಿನಕ್ಕೆ ರೂ. 250 ಮೀರದಂತೆ ಗೌರವಧನ ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ವಿಜಯ್ ತಿಳಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version