ಚಿತ್ರದುರ್ಗ: ಏನೇ ಪ್ರಯತ್ನ ನಡೆದರೂ ನೊಳಂಬ, ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಹೊಳಲ್ಕೆರೆ ಪಟ್ಟಣದಲ್ಲಿ ಬುಧವಾರ ಆಯೋಜಿಸಿದ್ದ ಗುರು ಸಿದ್ಧರಾಮೇಶ್ವರ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜವನ್ನು ಇಬ್ಭಾಗ ಮಾಡಲು ಗೊಂದಲ ನಿರ್ಮಾಣ ಮಾಡಿ, ರಾಜಕೀಯ ಲಾಭ ಪಡೆಯಲು ಷಡ್ಯಂತ್ರ ನಡೆಯುತ್ತಿದೆ. ಈ ಕುರಿತು ಸಮಾಜ ಎಚ್ಚರಿಕೆ ವಹಿಸಬೇಕು ಎಂದರು.
ಇದನ್ನೂ ಓದಿ: ಜ.17ರಂದು ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ
ನೊಳಂಬ ಸಮುದಾಯ ಸಮಾಜ ಕಟ್ಟುವ ಕೆಲಸ ಮಾಡಿದೆ. ಆದರೆ, ರಾಜಕೀಯ ದುಷ್ಟ ಶಕ್ತಿಗಳು ತಮ್ಮ ರಾಜಕೀಯ ಬೆಳೆ ಬೇಯಿಸಿಕೊಳ್ಳಲು ನೊಳಂಬ, ವೀರಶೈವ ಸಮಾಜವನ್ನು ಒಡೆದು ಹಾಕುವ ಕೆಲಸಕ್ಕೆ ಕೈ ಹಾಕಲಾಗಿದೆ. ಇದೆಲ್ಲವನ್ನು ಸಮುದಾಯ ಅರಿತುಕೊಂಡು ಸಮಾಜಕ್ಕೆ ಶಕ್ತಿ ತುಂಬುವ ಜೊತೆಗೆ ಸರಿದಾರಿಗೆ ಕರೆದೊಯ್ಯುವ ಕೆಲಸ ಮಾಡಬೇಕು ಎಂದು ತಿಳಿಸಿದರು.






















