ಚಿತ್ರದುರ್ಗ: ತಾಲ್ಲೂಕಿನ ಬೆಳಗಟ್ಟ ಗ್ರಾಮದಲ್ಲಿ ಮಂಗಳವಾರ ರಾತ್ರಿ ಬಸ್ ಮತ್ತು ಬೈಕ್ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ.
ತುರುವನೂರಿನಿಂದ ಚಿತ್ರದುರ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಮತ್ತು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ. ಚಳ್ಳಕೆರೆ ತಾಲ್ಲೂಕಿನ ಭೀಮಗೊಂಡನಹಳ್ಳಿ ಬೈರ ನಾಯಕನಹಟ್ಟಿಯ ತಿಪ್ಪೇಸ್ವಾಮಿ (29), ಪ್ರಭು ನಾಯಕ (40) ಮೃತಪಟ್ಟವರೆಂದು ಗುರುತಿಸಲಾಗಿದೆ.
ಈ ಕುರಿತು ತುರುವನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









