Home Advertisement
Home ನಮ್ಮ ಜಿಲ್ಲೆ ಚಿತ್ರದುರ್ಗ ಪಾದಚಾರಿಗೆ ಬಸ್ ಡಿಕ್ಕಿ: ಅಪರಿಚಿತ ಮಹಿಳೆ ಸಾವು

ಪಾದಚಾರಿಗೆ ಬಸ್ ಡಿಕ್ಕಿ: ಅಪರಿಚಿತ ಮಹಿಳೆ ಸಾವು

0
47

ಚಿತ್ರದುರ್ಗ: ಜಿಲ್ಲೆಯ ಕುಂಚಿಗನಾಳ್ ಬಳಿ ಭಾನುವಾರ ನಡೆದ ರಸ್ತೆ ಅಪಘಾತದಲ್ಲಿ ಅಪರಿಚಿತ ಮಹಿಳೆ ಮೃತಪಟ್ಟಿದ್ದಾರೆ.

ರಸ್ತೆ ದಾಟುತ್ತಿದ್ದ ಪಾದಚಾರಿ ಮಹಿಳೆಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಘಟನೆ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಈ ಅಪಘಾತದಿಂದ ಕೆಲಕಾಲ ಸಂಚಾರದಲ್ಲಿ ಅಡಚಣೆ ಉಂಟಾಯಿತು. ಪೊಲೀಸರು ವಾಹನಗಳನ್ನು ಸರಾಗವಾಗಿ ಸಾಗಿಸಲು ಕ್ರಮ ಕೈಗೊಂಡರು.