ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಕೆ.ಆರ್ ಹಳ್ಳಿ ಗೇಟ್ ಬಳಿ ಮಂಗಳವಾರ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ಟೈರ್ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಮುಂದೆ ಸಾಗುತ್ತಿದ್ದ ಲಾರಿ ಏಕಾಏಕಿ ಎಡಕ್ಕೆ ತಿರುಗಿದೆ. ಈ ವೇಳೆ ಹಿಂದೆ ಬರುತ್ತಿದ್ದ ಸ್ವಿಫ್ಟ್ ಕಾರು ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ಕುಷ್ಟಗಿ ಮೂಲದ ಶಶಿಧರ್ (22) ಮತ್ತು ಮಂಜುನಾಥ್ (22) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಬಸವರಾಜ್ (21) ಅವರನ್ನು ಹಿರಿಯೂರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಅವರನ್ನು ಹಿರಿಯೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ
- IPLನಲ್ಲಿ ಶುರುವಾಗಲಿದೆ ‘ದಾದಾಗಿರಿ’: ಡೆಲ್ಲಿ ಕ್ಯಾಪಿಟಲ್ಸ್ ಹೆಡ್ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ!
- ಆಕಾಶದಲ್ಲಿ ಭಾರತದ ಹೊಸ ಅಧ್ಯಾಯ: DRDO ಸ್ವದೇಶಿ HAPS ಪರೀಕ್ಷೆ ಯಶಸ್ವಿ
- ಚಿತ್ರದುರ್ಗ: ಭೀಕರ ಅಪಘಾತ – ಲಾರಿಗೆ ಕಾರು ಡಿಕ್ಕಿ, ಮೂವರು ಸಾವು
- ‘ಚಾಂಪಿಯನ್ಸ್ ಆಫ್ ಕೇರ್’: ರಾಜ್ಯದ 3 ಸಂಸ್ಥೆಗಳೂ ಸೇರಿ ದೇಶದ 50ಕ್ಕೂ ಹೆಚ್ಚು ಪ್ರಾಣಿ ಕಲ್ಯಾಣ ಸಂಸ್ಥೆಗಳಿಗೆ ವನತಾರಾ ಬೆಂಬಲ






















