SK Home Ad
Home ನಮ್ಮ ಜಿಲ್ಲೆ ಚಿತ್ರದುರ್ಗ ಹಿರಿಯೂರು ಉಪಚುನಾವಣೆ: ಕೆಪಿಸಿಸಿ ಅಧ್ಯಕ್ಷರ ಸಮ್ಮುಖದಲ್ಲೇ ಕೈ ಅಭ್ಯರ್ಥಿ ಹೆಸರು ಘೋಷಣೆ

ಹಿರಿಯೂರು ಉಪಚುನಾವಣೆ: ಕೆಪಿಸಿಸಿ ಅಧ್ಯಕ್ಷರ ಸಮ್ಮುಖದಲ್ಲೇ ಕೈ ಅಭ್ಯರ್ಥಿ ಹೆಸರು ಘೋಷಣೆ

0
13

ಚಿತ್ರದುರ್ಗ: ಹಿರಿಯೂರು ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಹಿರಿಯೂರು ಪಟ್ಟಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸ್ಥಳೀಯ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಅಭ್ಯರ್ಥಿ ಹೆಸರಿನ ಗುಟ್ಟು ರಟ್ಟಾಗಿದೆ.

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮೊಳಕಾಲ್ಮೂರು ಶಾಸಕ ಎನ್.ವೈ. ಗೋಪಾಲಕೃಷ್ಣ ಅವರು ಅಭ್ಯರ್ಥಿ ಹೆಸರನ್ನು ಪ್ರಸ್ತಾಪಿಸಿದ್ದಾರೆ. ದಿವಂಗತ ಸಚಿವ ಡಿ. ಸುಧಾಕರ್ ಪುತ್ರ ಸುಹಾಸ್ ಸುಧಾಕರ್ ಹೆಸರು ಹೇಳುತ್ತಿದ್ದಂತೆ ಸಭಿಕರಲ್ಲಿ ಹರ್ಷೋದ್ಗಾರ ಕೇಳಿಬಂದಿದೆ. ಚುನಾವಣೆ ಘೋಷಣೆಯಾದರೆ ಗೆದ್ದಂತೆಂದು ತೀರ್ಮಾನಿಸಿದ್ದೀರಿ. ಸಭೆಗೆ ಬಂದವರೆಲ್ಲಾ ನಿಜವಾಗಿ ಹೇಳಿ ಎಂದು ಶಾಸಕರು ಕೇಳಿದ ಪ್ರಶ್ನೆಗೆ ಕಾರ್ಯಕರ್ತರು ಸುಹಾಸ್ ಸುಧಾಕರ್ ಗೆದ್ದೇ ಗೆಲ್ಲಿಸುತ್ತೇವೆ ಎಂದು ಕೈ ಎತ್ತಿ ಬೆಂಬಲ ವ್ಯಕ್ತಪಡಿಸಿದರು.

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸಮ್ಮುಖದಲ್ಲೇ ಈ ಘಟನೆ ನಡೆದಿದ್ದು, ಸಭೆಯಲ್ಲಿ ಉಸ್ತುವಾರಿ ಸಚಿವ ಟಿ. ರಘುಮೂರ್ತಿ, ಸಚಿವ ಬಾಲಕೃಷ್ಣ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಸ್ಥಳೀಯ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಸುಹಾಸ್ ಸುಧಾಕರ್ ಅವರೇ ಖುದ್ದು ಭಾಗಿಯಾಗಿದ್ದರು. ಅಧಿಕೃತ ಘೋಷಣೆಗೆ ಮೊದಲೇ ಶಾಸಕರ ಬಾಯಿಂದ ಅಭ್ಯರ್ಥಿ ಹೆಸರು ಹೊರಬಿದ್ದಿರುವುದು ಹಿರಿಯೂರು ಕಾಂಗ್ರೆಸ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.