SK Home Ad
Home ನಮ್ಮ ಜಿಲ್ಲೆ ಚಿತ್ರದುರ್ಗ ಬೆಳಗಾವಿಗೆ ಕನಿಷ್ಠ 3 ಸಚಿವ ಸ್ಥಾನಗಳ ನಿರೀಕ್ಷೆ: ಲಕ್ಷ್ಮಣ ಸವದಿ

ಬೆಳಗಾವಿಗೆ ಕನಿಷ್ಠ 3 ಸಚಿವ ಸ್ಥಾನಗಳ ನಿರೀಕ್ಷೆ: ಲಕ್ಷ್ಮಣ ಸವದಿ

0
61

ಚಿತ್ರದುರ್ಗ: ಎರಡ್ಮೂರು ದಿನಗಳಲ್ಲಿ ರಾಜ್ಯ ಸಂಪುಟ ವಿಸ್ತರಣೆ ಕುರಿತು ತೀರ್ಮಾನವಾಗಲಿದೆ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಸಹಮತ ವ್ಯಕ್ತಪಡಿಸುತ್ತೇವೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ನನಗೆ ಏನು ಹೇಳಬೇಕು ಎಂದು ಹೇಳಿದ್ದಾರೆ. ನಾನು ಯಾವ ರೀತಿ ಸ್ವೀಕರಿಸಬೇಕು ಎಂದು ಸ್ವೀಕರಿಸಿದ್ದೇನೆ ಎಂದು ಹೇಳಿದರು. ಮೂರ್ನಾಲ್ಕು ದಿನಗಳಲ್ಲಿ ಸಂಪುಟ ವಿಸ್ತರಣೆ ಕುರಿತು ಸ್ಪಷ್ಟತೆ ಸಿಗಲಿದೆ ಎಂದರು.

ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದಂತೆ ಮಾತನಾಡಿದ ಸವದಿ, ಬೆಳಗಾವಿಗೆ 4-5 ಸಚಿವ ಸ್ಥಾನ ನೀಡಿದ ಉದಾಹರಣೆ ಇದೆ. ಒಂದೇ ಸಮುದಾಯಕ್ಕೆ 4-5 ಸಚಿವ ಸ್ಥಾನ ನೀಡಿದ್ದೂ ಇದೆ. 18 ವಿಧಾನಸಭಾ ಕ್ಷೇತ್ರಗಳಿರುವ ಬೆಳಗಾವಿ ಜಿಲ್ಲೆಗೆ ಕನಿಷ್ಠ 3 ಸಚಿವ ಸ್ಥಾನಗಳ ನಿರೀಕ್ಷೆಯಿದೆ. ಸಂಪುಟದಲ್ಲಿ ಪ್ರಾದೇಶಿಕ ಹಾಗೂ ಸಾಮಾಜಿಕ ಸಮತೋಲನ ಕಾಪಾಡಿಕೊಳ್ಳಲಾಗುವುದು ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

ಚನ್ನಮ್ಮ ಅವರ ನಿಧನಕ್ಕೆ ಸಂತಾಪ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಅವರು, “ಮನೆಗೆ ಹೋದವರನ್ನು ಆತ್ಮೀಯವಾಗಿ ಸತ್ಕರಿಸುತ್ತಿದ್ದ ತಾಯಿ ಚೆನ್ನಮ್ಮ ಅವರ ಅಗಲಿಕೆ ನಮಗೆಲ್ಲರಿಗೂ ನೋವು ತಂದಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ” ಎಂದು ಹೇಳಿದರು.