SK Home Ad
Home ನಮ್ಮ ಜಿಲ್ಲೆ ಚಿತ್ರದುರ್ಗ ದೊಡ್ಡಚಲ್ಲೂರು ಬಳಿ ಚಿರತೆ ದಾಳಿಗೆ ರೈತ ಬಲಿ

ದೊಡ್ಡಚಲ್ಲೂರು ಬಳಿ ಚಿರತೆ ದಾಳಿಗೆ ರೈತ ಬಲಿ

0
8

ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದೊಡ್ಡಚಲ್ಲೂರು ಗ್ರಾಮದ ಬಳಿ ಚಿರತೆ ದಾಳಿಗೆ ರೈತನೊಬ್ಬ ಬಲಿಯಾಗಿರುವ ಘಟನೆ ನಡೆದಿದೆ.

ಗ್ರಾಮದ ಹೊರವಲಯದಲ್ಲಿರುವ ಮನೆ ಬಳಿ ಗಳವಾರ ಮಧ್ಯರಾತ್ರಿ ರೈತ ರಾಮಚಂದ್ರಪ್ಪ (65) ಅವರ ಮೇಲೆ ಚಿರತೆ ದಾಳಿ ಮಾಡಿದೆ. ದಾಳಿಯಿಂದ ರೈತ ಸ್ಥಳದಲ್ಲೇ ಮರಣ ಹೊಂದಿದ್ದಾರೆ.

ಈ ಘಟನೆ ಪರಶುರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.