SK Home Ad
Home ನಮ್ಮ ಜಿಲ್ಲೆ ಚಿತ್ರದುರ್ಗ ಈರಜ್ಜನಹಟ್ಟಿ ಬಳಿ ಯುವಕನ ಭೀಕರ ಕೊಲೆ: ಆರೋಪಿಗಳಿಗಾಗಿ ಪೊಲೀಸರ ಬಲೆ

ಈರಜ್ಜನಹಟ್ಟಿ ಬಳಿ ಯುವಕನ ಭೀಕರ ಕೊಲೆ: ಆರೋಪಿಗಳಿಗಾಗಿ ಪೊಲೀಸರ ಬಲೆ

0
33

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಈರಜ್ಜನಹಟ್ಟಿ ಗ್ರಾಮದ ಬಳಿ 25 ವರ್ಷದ ಯುವಕನೊಬ್ಬನನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಕೊಲೆಯಾದ ಯುವಕನನ್ನು ಹೊಳಲ್ಕೆರೆ ತಾಲೂಕಿನ ಶಿವಗಂಗಾ ಗ್ರಾಮದ ನಿವಾಸಿ ರಂಗಸ್ವಾಮಿ (25) ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ಯುವಕನ ಮುಖ ಗುರುತು ಸಿಗದಂತೆ ಕಲ್ಲಿನಿಂದ ಜಜ್ಜಿ ಹಾಕಿ ಕೊಲೆ ಮಾಡಿದ್ದಾರೆ.

ಈರಜ್ಜನಹಟ್ಟಿ ಗ್ರಾಮದ ಹೊರವಲಯದಲ್ಲಿ ಮೃತದೇಹ ಪತ್ತೆಯಾಗಿದೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಕೊಲೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಸ್ಥಳಕ್ಕೆ ಸಿಪಿಐ ಬಾಲಚಂದ್ರ ನಾಯ್ಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.