Home ನಮ್ಮ ಜಿಲ್ಲೆ ಚಿತ್ರದುರ್ಗ ಚಿತ್ರದುರ್ಗ: ಹಿಂದೂ ಮಹಾಗಣಪತಿ ವಿಸರ್ಜನೆ, ಸಂಚಾರ ಮಾರ್ಗ ಬದಲು

ಚಿತ್ರದುರ್ಗ: ಹಿಂದೂ ಮಹಾಗಣಪತಿ ವಿಸರ್ಜನೆ, ಸಂಚಾರ ಮಾರ್ಗ ಬದಲು

0

ಚಿತ್ರದುರ್ಗ ನಗರದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ ಸೆಪ್ಟೆಂಬರ್ 13ರಂದು ನಡೆಯಲಿದೆ. ಈ ಹಿನ್ನಲೆಯಲ್ಲಿ ಪೊಲೀಸರು ಅಗತ್ಯ ಬಂದೋಬಸ್ತ್ ಮಾಡಿದ್ದು, ನಗರದಲ್ಲಿ ರಸ್ತೆ ಸಂಚಾರ ಮಾರ್ಗ ಬದಲಾವಣೆ ಮಾಡಿ ಆದೇಶಿಸಲಾಗಿದೆ.

ಈ ಕುರಿತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ. ಚಿತ್ರದುರ್ಗ ನಗರದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ನಡೆಯಲಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಅಂದು ನಗರದಲ್ಲಿನ ರಸ್ತೆ ಸಂಚಾರದ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ.

ಚಿತ್ರದುರ್ಗ ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ವತಿಯಿಂದ ಪ್ರತಿಷ್ಠಾಪಿಸಲ್ಪಟ್ಟಿರುವ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣೆಗೆ ಕಾರ್ಯಕ್ರಮ ನಡೆಯಲಿದೆ.

ಈ ವಿಸರ್ಜನಾ ಮೆರವಣಿಗೆ ನಗರದಲ್ಲಿ ಹಾದು ಹೋಗಿರುವ ಮುಖ್ಯ ರಸ್ತೆಯಾದ ಬಿ.ಡಿ. ರಸ್ತೆಯಲ್ಲಿ ಸಾಗಿ ಹೊಳಲ್ಕೆರೆ ರಸ್ತೆ ಮುಖಾಂತರ ಹೋಗಲಿದ್ದು, ಮೆರವಣೆಗೆಯಲ್ಲಿ ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆಯಿದೆ.

ಈ ಮೆರವಣಿಗೆ ಸಮಯದಲ್ಲಿ ಚಿತ್ರದುರ್ಗ ನಗರದಲ್ಲಿನ ರಸ್ತೆಗಳಲ್ಲಿ ಸಂಚರಿಸುತ್ತಿರುವ ವಾಹನಗಳು ನಗರದ ಮುಖ್ಯರಸ್ತೆ ಹಾಗೂ ಇತರೆ ರಸ್ತೆಗಳಲ್ಲಿ ಸಂಚರಿಸಲು ಸಾಧ್ಯವಾಗದ ಕಾರಣ ನಗರದಲ್ಲಿ ಸಂಚರಿಸಲಿರುವ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸಲು ಆದೇಶ ಹೊರಡಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಕೋರಿರುತ್ತಾರೆ.

ಕರ್ನಾಟಕ ಪೊಲೀಸ್ ಅಧಿನಿಯಮ ಕಲಂ 31ರ ಮೇರೆಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸಾರ್ವಜನಿಕ ಸಂಚಾರ ಕ್ರಮಗೊಳಿಸುವ ದೃಷ್ಠಿಯಿಂದ ನಗರದ ಮುಖ್ಯರಸ್ತೆ ಮತ್ತು ಇತರೆ ರಸ್ತೆಗಳಲ್ಲಿ ಸಂಚರಿಸಲಿರುವ ವಾಹನಗಳನ್ನು ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.

ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್‍ನಿಂದ ಮಹಾತ್ಮಾಗಾಂಧಿ ವೃತ್ತ, ಹೊಳಲ್ಕೆರೆ ಮಾರ್ಗದ ಕಣಿವೆ ಕ್ರಾಸ್‍ವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರ ನಿಷೇಧಿಸಿದೆ.

ಬೆಂಗಳೂರು, ಚಳ್ಳಕೆರೆ, ಹೊಸಪೇಟೆ, ದಾವಣಗೆರೆ, ಹೊಳಲ್ಕೆರೆ, ಶಿವಮೊಗ್ಗ ಹಾಗೂ ಭೀಮಸಮುದ್ರ ಕಡೆಯಿಂದ ಬರುವ ಎಲ್ಲಾ ಮಾದರಿಯ ಲಘು ಮತ್ತು ಭಾರಿ ವಾಹನಗಳು ಹಾಗೂ ಖಾಸಗಿ ಮತ್ತು ಕೆಎಸ್‍ಆರ್‌ಟಿಸಿ ಬಸ್‍ಗಳು ಎನ್.ಹೆಚ್-48 ರಸ್ತೆಯ ಮುಖಾಂತರ ಬಂದು ನಗರದ ಮೆದೇಹಳ್ಳಿ ರಸ್ತೆಯ ಮುಖಾಂತರ ಬಂದು ನಗರದ ಮೆದೇಹಳ್ಳಿ ರಸ್ತೆ ಮತ್ತು ಜೆಎಂಐಟಿ ವೃತ್ತದ ಮುಖಾಂತರ ನಗರಕ್ಕೆ ಬಂದು ಅದೇ ಮಾರ್ಗದಲ್ಲಿ ವಾಪಾಸ್ ಹೋಗುವುದು.

NO COMMENTS

LEAVE A REPLY

Please enter your comment!
Please enter your name here

Exit mobile version