ಹೊತ್ತಿ ಉರಿದ ರಾಜಹಂಸ ಬಸ್: ಕೂದಲೆಳೆಯ ಅಂತರದಲ್ಲಿ ತಪ್ಪಿದ ಭಾರೀ ದುರಂತ
ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಚಲಿಸುತ್ತಿದ್ದ ರಾಜಹಂಸ ಬಸ್ ಏಕಾಏಕಿ ಬೆಂಕಿಗೆ ಆಹುತಿಯಾಗಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದ ಘಟನೆ ಶನಿವಾರ ಚಿತ್ರದುರ್ಗ ತಾಲೂಕಿನ ಕಾತ್ರಾಳ್ ಕೆರೆ ಬಳಿ ನಡೆದಿದೆ. ಚಿತ್ರದುರ್ಗದಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ರಾಜಹಂಸ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತ ಚಾಲಕ ಬಸ್‌ನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ, ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಇದರಿಂದ ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ, ಕ್ಷಣಾರ್ಧದಲ್ಲಿ … Continue reading ಹೊತ್ತಿ ಉರಿದ ರಾಜಹಂಸ ಬಸ್: ಕೂದಲೆಳೆಯ ಅಂತರದಲ್ಲಿ ತಪ್ಪಿದ ಭಾರೀ ದುರಂತ
Copy and paste this URL into your WordPress site to embed
Copy and paste this code into your site to embed