Home Advertisement
Home ನಮ್ಮ ಜಿಲ್ಲೆ ಚಿತ್ರದುರ್ಗ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಸಾವು

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಸಾವು

0
469

ಚಳ್ಳಕೆರೆ: ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಸಂಬಂಧ, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ತಾಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯ ಹಿರೇಹಳ್ಳಿ ಟೋಲ್ ಬಳಿ ಸಂಭವಿಸಿದೆ.

ಮೃತರು ಹಾಗೂ ಗಾಯಗೊಂಡವರನ್ನು ತುಮಕೂರು ಜಿಲ್ಲೆಯ ಕುಣಿಗಲ್ ಮೂಲದವರೆಂದು ಪ್ರಾಥಮಿಕವಾಗಿ ಗುರುತಿಸಲಾಗಿದೆ. ಈ ಐವರು ಸೇರಿ ಕಾರಿನಲ್ಲಿ ಮಂತ್ರಾಲಯಕ್ಕೆ ದೇವರ ದರ್ಶನಕ್ಕೆಂದು ತೆರಳಿದ್ದರು. ದರ್ಶನ ಮುಗಿಸಿಕೊಂಡು ಅಲ್ಲಿಂದ ವಾಪಸ್ ತಮ್ಮ ಊರಾದ ಕುಣಿಗಲ್ ಕಡೆಗೆ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಇದನ್ನೂ ಓದಿ: ಅಜ್ಞಾತ ಸ್ಥಳದಿಂದ ಮಲ್ಲಿಕಾರ್ಜುನ ಮುತ್ಯಾ ವಿಡಿಯೋ ರಿಲೀಸ್

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಐವರ ಪೈಕಿ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ರಕ್ಷಿಸಿ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ತಳಕು ಠಾಣೆ ಪೊಲೀಸರು, ಪರಿಶೀಲನೆ ನಡೆಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತರ ನಿಖರವಾದ ಹೆಸರು ಹಾಗೂ ವಿಳಾಸವನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಪೊಲೀಸರು ನಿರತರಾಗಿದ್ದಾರೆ. ಈ ಕುರಿತು ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.