ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಉಳ್ಳಾಲ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಮೇಲಂಗಡಿ ನಿವಾಸಿ ಇಮ್ರಾನ್ ಯಾನೆ ಸುರ್ಮೋ ಇಮ್ರಾನ್ ಬಂಧಿತ ಆರೋಪಿ. ಈತ ಮಂಗಳೂರು ನಗರ ಮತ್ತು ಉಡುಪಿ ಜಿಲ್ಲೆಯ ಒಟ್ಟು 23 ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈತನ ವಿರುದ್ಧ ಮಂಗಳೂರು ನಗರದ ಹಲವಾರು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತನ ಬಂಧನಕ್ಕೆ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು. ಈತನನ್ನು ಉಳ್ಳಾಲ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
Copy and paste this URL into your WordPress site to embed
Copy and paste this code into your site to embed