ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿರುವುದಾಗಿ ಆರೋಪ ಮಾಡಿರುವ ಪ್ರಕರಣದಲ್ಲಿ ಎರಡನೆ ಹಂತದ ಕಾರ್ಯಾಚರಣೆ ಎಸ್.ಐ.ಟಿ ಅಧಿಕಾರಿಗಳು ಆರಂಭಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲಗುಡ್ಡದ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಗೆ ಸೇರಿದ 12 ಎಕ್ರರೆಯಲ್ಲಿ ಸೆ.17 ರಂದು 11:30 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳ ಜೊತೆಯಲ್ಲಿ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಧರ್ಮಸ್ಥಳ ಗ್ರಾಮ ಪಂಚಾಯತ್ ಅಧಿಕಾರಿಗಳು,ಎಫ್.ಎಸ್.ಎಲ್ ವಿಭಾಗದ ಸೋಕೊ ತಂಡ, ಮಂಗಳೂರು ಕೆ.ಎಮ್.ಸಿ ವೈದ್ಯರು,ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಸೇರಿ ಸುಮಾರು 50 ಕ್ಕೂ ಹೆಚ್ಚು ಅಧಿಕಾರಿಗಳು ಭೂಮಿಯ ಮೇಲ್ಭಾಗದಲ್ಲಿರುವ ಕಳೇಬರಗಳ ಮಹಜರು ಮಾಡಿ ಪ್ರಯೋಗಾಲಯಕ್ಕೆ ಕಳುಹಿಸಲು ಕಾರ್ಯಾಚರಣೆಗೆ ಇಳಿದಿದ್ದಾರೆ.