SK Home Ad
Home ನಮ್ಮ ಜಿಲ್ಲೆ ದಕ್ಷಿಣ ಕನ್ನಡ ಬೆಳ್ತಂಗಡಿ: ಮನೆಯ ಅಂಗಳಕ್ಕೆ ಬಂದ ಚಿರತೆ ಬೋನಿಗೆ ಸೆರೆ

ಬೆಳ್ತಂಗಡಿ: ಮನೆಯ ಅಂಗಳಕ್ಕೆ ಬಂದ ಚಿರತೆ ಬೋನಿಗೆ ಸೆರೆ

0
51

ಬೆಳ್ತಂಗಡಿ (ಮಂಗಳೂರು) : ಮನೆಯ ಅಂಗಳದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆಯೊಂದು ಸೆರೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಹನ್ಯಾಡಿ ಪಲ್ಕೆ ಪ್ರದೇಶದಲ್ಲಿ ಸೆಪ್ಟೆಂಬರ್ 1ರ ಬೆಳಗ್ಗೆ ನಡೆದಿದೆ. ಹನ್ಯಾಡಿ ಪಲ್ಕೆ ನಿವಾಸಿ ಬಾಲಕೃಷ್ಣ ನಾಯ್ಕ ಅವರ ಮನೆಯ ಅಂಗಳದಲ್ಲಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಸೆರೆಹಿಡಿಯಲು ಬೋನು ಇರಿಸಿದ್ದರು. ಬೆಳಗ್ಗೆ ಪರಿಶೀಲನೆ ನಡೆಸಿದಾಗ ಚಿರತೆ ಬೋನಿಗೆ ಸೆರೆಯಾಗಿರುವುದು ಕಂಡುಬಂದಿದೆ.

ಚಿರತೆ ಸೆರೆಯಾಗಿರುವ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಸೆರೆಯಾಗಿರುವ ಚಿರತೆಯನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಕಾರ್ಯಾಚರಣೆ ನಡೆಸಲು ಅರಣ್ಯ ಇಲಾಖೆ ಸಿದ್ಧತೆ ನಡೆಸುತ್ತಿದೆ.

ಈ ಪ್ರದೇಶದಲ್ಲಿ ಚಿರತೆಗಳ ಓಡಾಟದಿಂದ ಸ್ಥಳೀಯರಲ್ಲಿ ಆತಂಕ ಮೂಡಿತ್ತು. ಕೆಲ ಸಮಯದ ಹಿಂದೆ ಇದೇ ಭಾಗದ ಸ್ಥಳೀಯ ನಿವಾಸಿ ಗುರಿಕಂಡ ಆನಂದ ಶೆಟ್ಟಿ ಅವರ ಮನೆಯ ಬಳಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೂ ಎರಡು ಚಿರತೆಗಳು ಸೆರೆಯಾಗಿದ್ದವು.

ಸತತವಾಗಿ ಚಿರತೆಗಳು ಬೋನಿಗೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಕುತೂಹಲದ ಜೊತೆಗೆ ಆತಂಕವೂ ಮುಂದುವರಿದಿದೆ. ಅರಣ್ಯ ಇಲಾಖೆ ಚಿರತೆಗಳ ಚಲನವಲನದ ಮೇಲೆ ನಿಗಾ ಇರಿಸಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದೆ.

ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.