ಉಜಿರೆ: ಗ್ರಾಮೀಣ ಮತ್ತು ಉದ್ಯೋನ್ಮುಖ ಕೇಂದ್ರಗಳಲ್ಲಿ ಶಿಕ್ಷಣ ಮತ್ತು ಮೂಲ ಸೌಕರ್ಯಗಳನ್ನು ಬಲಪಡಿಸುವ ಮೂಲಕ ಬಜೆಟ್ ಅಸಮಾನತೆಗಳನ್ನು ಕಡಿಮೆ ಮಾಡಲು ಮತ್ತು ಜೀವನೋಪಾಯವನ್ನು ಸೃಷ್ಟಿಸಲು ಅವಕಾಶ ಮಾಡಿಕೊಡುತ್ತದೆ. ಆರೋಗ್ಯ, ಶಿಕ್ಷಣ ಮತ್ತು ಮೌಲ್ಯಗಳ ನೆಲೆಯಲ್ಲಿ ಕೌಶಲಗಳ ಮೂಲಕ ಮಾರ್ಗದರ್ಶನ ಮತ್ತು ಪ್ರೇರಣೆ ನೀಡಿದಾಗ ಅದು ಸ್ವಾವಲಂಬನೆ, ಆಂತರಿಕ ಬೆಳವಣಿಗೆ ಮತ್ತು ರಾಷ್ಟ್ರದ ಪ್ರಗತಿಗೆ ಪೂರಕವಾಗುವಂತೆ ಈ ಬಾರಿಯ ಬಜೆಟ್ ಮಂಡಿಸಲಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದ್ದಾರೆ.
ದೇಶದ ಪ್ರಗತಿಯ ತಳಹದಿಯಾಗಿ ಮಾನವ ಸಾಮರ್ಥ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಬಜೆಟ್ ಸೃಜನಾತ್ಮಕ ಬದಲಾವಣೆಯನ್ನು ಸೂಚಿಸುತ್ತದೆ. ಆರೋಗ್ಯ, ಶಿಕ್ಷಣ, ಆಯುರ್ವೇದ ಮತ್ತು ತರಬೇತಿ ಬಗ್ಗೆ ವಿಶೇಷ ಒತ್ತು ನೀಡಿರುವುದು ಸ್ವಾಗತಾರ್ಹವಾಗಿದೆ. ರೋಗನಿರೋಧಕ ಆರೈಕೆ ಮತ್ತು ಮಾನವಕೇಂದ್ರಿತ ಅಭಿವೃದ್ಧಿಯು ಸ್ಥಿತಿಸ್ತಾಪಕ ಸಮಾಜಕ್ಕೆ ಅಗತ್ಯ ಎಂಬುದನ್ನು ವಿಶ್ಲೇಷಿಸಲಾಗಿದೆ.
ಸಮಗ್ರ ಆರೋಗ್ಯಭಾಗ್ಯ ರಕ್ಷಣೆ ಬಗ್ಗೆ ಗಮನವು ಆರೋಗ್ಯ ಪ್ರವಾಸೋದ್ಯಮಕ್ಕೆ ಹೊಸ ಆಯಾಮವನ್ನು ನೀಡಿದೆ. ಪರಿಣಾಮವಾಗಿ ಭಾರತವನ್ನು ಸಮಗ್ರ ಚಿಕಿತ್ಸೆಯ ಜಾಗತಿಕ ತಾಣವಾಗಿ ಮಾರ್ಪಾಡು ಮಾಡುತ್ತದೆ. ವಿಶೇಷವಾಗಿ ಗ್ರಾಮೀಣ ಪ್ರದೇಶ ಮತ್ತು ಉದಯೋನ್ಮುಖ ಕೇಂದ್ರಗಳಲ್ಲಿ ಶಿಕ್ಷಣ ಮತ್ತು ಮೂಲಸೌಕರ್ಯಗಳನ್ನು ಬಲಪಡಿಸುವ ಮೂಲಕ, ಬಜೆಟ್ ಅಸಮಾನತೆಗಳನ್ನು ಕಡಿಮೆ ಮಾಡಲು ಹಾಗೂ ಜೀವನೋಪಾಯಗಳನ್ನು ಸೃಷ್ಟಿಸಲು ಅವಕಾಶ ಮಾಡಿಕೊಡುತ್ತದೆ ಎಂದು ಹೆಗ್ಗಡೆಯವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.























