Home ನಮ್ಮ ಜಿಲ್ಲೆ ದಕ್ಷಿಣ ಕನ್ನಡ ದಂಪತಿಯಿಂದ ಚಿಟ್ ಫಂಡ್ ಹೆಸರಲ್ಲಿ ಕೋಟ್ಯಂತರ ರೂ. ಪಂಗನಾಮ

ದಂಪತಿಯಿಂದ ಚಿಟ್ ಫಂಡ್ ಹೆಸರಲ್ಲಿ ಕೋಟ್ಯಂತರ ರೂ. ಪಂಗನಾಮ

0
ದಂಪತಿಯಿಂದ ಚಿಟ್ ಫಂಡ್ ಹೆಸರಲ್ಲಿ ಕೋಟ್ಯಂತರ ರೂ. ಪಂಗನಾಮ

ಮಂಗಳೂರು: ಸುರತ್ಕಲ್ “ಭಾರ್ಗವಿ ಫೈನಾನ್ಸ್” ಮಾಲಕ ಮತ್ತಾತನ ಪತ್ನಿ ಜನರಿಗೆ ಕೋಟ್ಯಂತರ ರೂಪಾಯಿ ಪಂಗನಾಮ ಹಾಕಿದ ಘಟನೆ ಬೆಳಕಿಗೆ ಬಂದಿದ್ದು ಸಿಸಿಬಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಸುರತ್ಕಲ್ ನಿವಾಸಿ ದೀಪಕ್ ಶೆಟ್ಟಿ ಎಂಬವರು ದೂರು ನೀಡಿದ್ದು, ಸುರತ್ಕಲ್‌ನಲ್ಲಿ ಭಾರ್ಗವಿ ಫೈನಾನ್ಸ್ ಹೊಂದಿದ್ದ ಅಶೋಕ್ ಭಟ್, ಪತ್ನಿ ವಿದ್ಯಾವತಿ ಭಟ್, ಮಗಳು ಪ್ರಿಯಾಂಕಾ ಭಟ್ ಪ್ರಕರಣದ ಆರೋಪಿಗಳು. ಇವರ ವಿರುದ್ಧ ಸೆನ್ ಅಪರಾಧ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.