Home ನಮ್ಮ ಜಿಲ್ಲೆ ದಕ್ಷಿಣ ಕನ್ನಡ ಮಂಗಳೂರು: GST ಏರಿಸಿದ್ದೂ ಅವರೇ ಇಳಿಸಿದ್ದೂ ಅವರೇ ಸಂಭ್ರಮ ಪಡುವಂತದ್ದೇನಿದೆ? – ಮಂಜುನಾಥ ಭಂಡಾರಿ

ಮಂಗಳೂರು: GST ಏರಿಸಿದ್ದೂ ಅವರೇ ಇಳಿಸಿದ್ದೂ ಅವರೇ ಸಂಭ್ರಮ ಪಡುವಂತದ್ದೇನಿದೆ? – ಮಂಜುನಾಥ ಭಂಡಾರಿ

0

ಮಂಗಳೂರು: ಕೇಂದ್ರದ ಬಿಜೆಪಿ ಸರಕಾರವು ಜಿಎಸ್‌ಟಿಯನ್ನು ಜಾರಿಗೆ ತಂದು ಜನಸಾಮಾನ್ಯರಿಗೆ ತೊಂದರೆಯನ್ನು ನೀಡಿದೆ. ಕಳೆದ 8 ವರ್ಷಗಳಲ್ಲಿ ಬಡ ಮತ್ತು ಮಧ್ಯಮ ವರ್ಗದ ಜನರು ಸಾಕಷ್ಟು ಸಮಸ್ಯೆ, ತೊಂದರೆಯನ್ನು ಅನುಭವಿಸಿದ್ದರು. ಜಿಎಸ್‌ಟಿಯನ್ನು ಹೆಚ್ಚು ಮಾಡಿದ್ದು ಅವರೇ, ಈಗ ಕಡಿಮೆ ಮಾಡಿರುವುದೂ ಅವರೇ. ಇದಕ್ಕೆಲ್ಲಾ ಸಂಭ್ರಮದ ಆಚರಣೆಯ ಅಗತ್ಯ ಇದೆಯಾ ಎಂದು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಪ್ರಶ್ನೆ ಮಾಡಿದ್ದಾರೆ.

ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ ಭಂಡಾರಿ, ಜಿಎಸ್‌ಟಿಯಿಂದ ಅದೆಷ್ಟೋ ಸಂಖ್ಯೆಯ ಕಂಪೆನಿಗಳು ನೆಲ ಕಚ್ಚಿದೆ, ಉದ್ದಿಮೆಗಳು ನಷ್ಟ ಅನುಭವಿಸಿವೆ. ಆವಾಗಲೇ ಜಿಎಸ್‌ಟಿಯನ್ನು ಸರಳೀಕರಣ ಮಾಡುತ್ತಿದ್ದರೆ ಆರ್ಥಿಕತೆ ಸುಧಾರಣೆ ಕಾಣುತ್ತಿತ್ತು.

ಕಳೆದ 8 ವರ್ಷಗಳಲ್ಲಿ ಜನರಿಂದ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆಯನ್ನು ಸಂಗ್ರಹ ಮಾಡಿದ್ದಾರೆ. 2014 ರಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರ ವಹಿಸಿ ಕೊಂಡಿದ್ದರೆ ಜಿಎಸ್‌ಟಿಯನ್ನು ಜಾರಿಗೆ ತರುತ್ತಿತ್ತು. ಚುನಾವಣೆಯ ಪ್ರಣಾಳಿಕೆಯಲ್ಲಿಯೂ ಈ ವಿಷಯ ಇದ್ದವು. ಇದು ಮಹಾನ್ ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರ ಕನಸಿನ ಕೂಸು ಕೂಡ ಆಗಿತ್ತು. ಆದರೆ ಮನಮೋಹನ್ ಸಿಂಗ್ ಅವರ ಪರಿಕಲ್ಪನೆಯ ಜಿ ಎಸ್‌ಟಿ ಗೂ ಬಿಜೆಪಿ ಸರ್ಕಾರ ಜಾರಿಗೆ ತಂದ ಜಿಎಸ್‌ಟಿ ಗೂ ಹಲವಾರು ವ್ಯತ್ಯಾಸಗಳಿವೆ ಎಂದರು.

ಮುಂದೆ ಬಿಹಾರ ಸೇರಿದಂತೆ ಇತರೇ ರಾಜ್ಯಗಳಲ್ಲಿ ಚುನಾವಣೆಗಳು ನಡೆಯಲಿವೆ. ಎಲ್ಲಿ ಚುನಾವಣೆಯಲ್ಲಿ ಕಡಿಮೆ ಮತ ಸಿಗುತ್ತೋ ಎಂಬ ಭಯದಲ್ಲಿ ಜಿಎಸ್‌ಟಿಯನ್ನು ಕಡಿಮೆ ಮಾಡಲಾಗಿದೆ ಎಂದು ಅವರು ವ್ಯಂಗ್ಯವಾಡಿದರು. ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂಎಸ್ ಮುಹಮ್ಮದ್, ಸಾಹುಲ್ ಹಮೀದ್, ಎಸ್ ಅಪ್ಪಿ, ಇಬ್ರಾಹಿಂ ನವಾಜ್, ಸುಹಾನ್ ಆಳ್ವಾ, ಶುಭಾಶ್ಚಂದ್ರ ಶೆಟ್ಟಿ ಕೊಳ್ನಾಡ್, ಚಿತ್ತಾರಂಜನ್ ಶೆಟ್ಟಿ, ವಿಕಾಸ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version